ಕರಾವಳಿ

ಕಾರ್‌ಸ್ಟ್ರೀಟ್ ಕಾಲೇಜಿನಲ್ಲಿ ಉಪಮುಖ್ಯಮಂತ್ರಿಗಳಿಗೆ ಸನ್ಮಾನ

Pinterest LinkedIn Tumblr

ಮಂಗಳೂರು : ಡಾ.ಪಿ.ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ರಥಬೀದಿ ಇಲ್ಲಿ ಇತ್ತೀಚಿಗೆ ಕಾಲೇಜಿನ ನೂತನ ಕಟ್ಟಡದ ಶಂಕು ಸ್ಥಾಪನಾ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಾ.ಅಶ್ವಥ್ಥನಾರಾಯಣ ಸಿ.ಎನ್ ಅವರು ಆಗಮಿಸಿದ್ದಿ ಈ ಸಂದರ್ಭ ಉಪಮುಖ್ಯಮಂತ್ರಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲಿ ಕಾಲೇಜಿನ ಅಭಿವೃಧ್ಧಿ, ಮುಂದಿನ ಯೋಜನೆಗಳ ಬಗ್ಗೆ ಈ ಭಾಗದ ಜನಪ್ರಿಯ ಯುವ ಶಾಸಕ ಹಾಗೂ ಕಾಲೇಜು ಅಭಿವೃಧ್ಧಿ ಸಮಿತಿಯ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಹಾಗೂ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಹಾಗೂ ಮಂಗಳೂರು ವಲಯದ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ.ಅಪ್ಪಾಜಿಗೌಡ ಎಂ.ಜೆ ಅವರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಕಾಲೇಜಿನ ಬೇಡಿಕೆಗಳ ಬಗ್ಗೆ ಮನವಿ ನೀಡಿದರು.

ಕಾಲೇಜನ್ನು ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಡಾ.ದಯಾನಂದ ಪೈ ಅವರ ಕೊಡುಗೆಯೊಂದಿಗೆ ಅಭಿವೃಧ್ಧಿಗೊಳಿಸಿದ ಬಗ್ಗೆ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ನೇತೃತ್ವ ವಹಿಸಿದ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಕಾಲೇಜನ್ನು ಸರ್ಕಾರದ ಪೋಷಕರಾದ ಡಾ.ದಯಾನಂದ ಪೈ ಯವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಮಾದರಿ ಕಾಲೇಜನ್ನಾಗಿ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರನ್ನು ಶಾಲು ಹೊದಿಸಿ, ಸ್ಮರಣಿಕೆ, ಫಲಪುಷ್ಪ ನೀಡಿ ಶಾಸಕರು ಸನ್ಮಾನಿಸಿದರು. ಸನ್ಮಾನ ಕಾರ್ಯಕ್ರಮದಲ್ಲಿ ಸ್ಥಳೀಯ ನಾಯಕರುಗಳು ಹಾಜರಿದ್ದರು.

Comments are closed.