ಮಂಗಳೂರು ಫೆಬ್ರವರಿ 18 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆಯಲ್ಲಿ ಪ್ರತಿದಿನಕ್ಕೆ ಪ್ರಕರಣವಾರು ಭತ್ಯೆಯ ಆಧಾರದ ಮೇಲೆ ಖಾಲಿ ಇರುವ ತಜ್ಞ ವೈದ್ಯರ ಕೆಲಸ ನಿರ್ವಹಿಸಲು ಫೆಬ್ರವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಇಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತಿ ಇರುವ ಖಾಸಗಿ ನಿರ್ವಹಣೆ ಮಾಡುತ್ತಿರುವ ತಜ್ಞತೆ ಹೊಂದಿರುವ ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು ಹಾಗೂ ಇತರೇ ತಜ್ಞರು ತಮ್ಮ ದಾಖಲಾತಿ ಹಾಗೂ ಪ್ರತಿ ಪ್ರಕರಣದ ದರದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08272-225443 ನ್ನು ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕೊಡಗು ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.
ವೈದ್ಯರ ನೇಮಕಾತಿ : ನೇರ ಸಂದರ್ಶನ
ಕೊಡಗು ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಅಧೀನದಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಫೆಬ್ರವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ಮಂಗಳೂರು ಇಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :- 08272-225443 ನ್ನು ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕೊಡಗು ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Comments are closed.