ಕರಾವಳಿ

‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಮಹಿಳಾ ಸಾಧಕರಿಂದ ಅರ್ಜಿ ಅಹ್ವಾನ

Pinterest LinkedIn Tumblr

ಮಂಗಳೂರು :ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಫೆಬ್ರವರಿ 29 ಮತ್ತು ಮಾರ್ಚ್ 1 ರಂದು ಜರಗುವ ‘ವೀರರಾಣಿ ಅಬ್ಬಕ್ಕ ಉತ್ಸವ-2020’ ಕಾರ್ಯಕ್ರಮದಲ್ಲಿ ನೀಡಲಾಗುವ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಸಾಧಕ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಬ್ಬಕ್ಕ ಪ್ರಶಸ್ತಿಗೆ ಕರಾವಳಿ ಮೂಲದ ಇಬ್ಬರು ಮಹಿಳೆಯರನ್ನು ಆಯ್ಕೆ ಮಾಡಲಿದ್ದು ಅದರಲ್ಲಿ ಓರ್ವರು ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದು ನಾಡು-ನುಡಿಗೆ ವಿಶೇಷ ಕೊಡುಗೆ ನೀಡಿದವರಾಗಿರಬೇಕು.

ಇನ್ನೊಂದು ಪ್ರಶಸ್ತಿ ಸಾಹಿತ್ಯೇತರ ಕ್ಷೇತ್ರಕ್ಕೆ ಮೀಸಲಾಗಿದ್ದು ಕಲೆ, ಕ್ರೀಡೆ, ರಂಗಭೂಮಿ ಅಥವಾ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರಾಗಿರಬೇಕು.

ಈ ಮೇಲಿನ ವಿಭಾಗಗಳಲ್ಲಿ ಅರ್ಹರಾದ ಮಹಿಳೆಯರು ಅಥವಾ ಅವರ ಬಗ್ಗೆ ಬಲ್ಲವರು ಸೂಕ್ತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್ ಮಂಗಳೂರು ಇವರಿಗೆ ಸಲ್ಲಿಸಬೇಕು. ಎಂದು ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ

Comments are closed.