ಕರಾವಳಿ

ಫೆ.22 ರಿಂದ 25 ರವರೆಗೆ ಕರ್ನಾಟಕ ಕುಸ್ತಿ ಹಬ್ಬ : ವಿವಿಧ ದೇಶಗಳ ಕುಸ್ತಿ ಪಟುಗಳು ಭಾಗಿ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘದ ಸಹಯೋಗ ದಲ್ಲಿ ಫೆಬ್ರವರಿ 22 ರಿಂದ 25 ರವರೆಗೆ 4 ದಿನಗಳ ಕಾಲ ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಹಮ್ಮಿಕೊಂಡಿದೆ.

ದೇಶದ ಹೆಸರಾಂತ ಸುಮಾರು 1200 ಕ್ಕೂ ಹೆಚ್ಚು ಕುಸ್ತಿಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ 3 ಅಖಾಡಗಳಲ್ಲಿ 30 ಪ್ರತ್ಯೇಕ ತೂಕಗಳ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 80 ಲಕ್ಷ ರೂ. ಮೌಲ್ಯದ ನಗದು ಬಹುಮಾನ, ಪಾರಿತೋಷಕಗಳನ್ನು ನೀಡಲಾಗುವುದು.

ಅಜರ್‍ಬೈಜಾನ್, ಜಾರ್ಜಿಯಾ,ಇರಾನ್ ದೇಶಗಳ ಕುಸ್ತಿಪಟುಗಳ ಜೊತೆಗೆ ಭಾರತದ ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪಂದ್ಯ ವಿಜೇತ್, ಯೋಗೇಶ್ವರ ದತ್, ಪದ್ಮ ಶ್ರೀ, ಅರ್ಜುನ್ ಪ್ರಶಸ್ತಿ ವಿಜೇತರು ಹಾಗೂ ನಿವೃತ್ತ ಐಜಿಪಿ ಕರ್ತಾರ ಸಿಂಗ್,ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ ಒಲಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್, ಅಂತರಾಷ್ಟ್ರೀಯ ಕುಸ್ತಿಪಟು ಮಹ್ಮದ ಮುರಾಡಿ, ಭಾರತ ಕೇಸರಿ ಉಮೇಶ ಚೌದರಿ ,ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಾದ ಅಂಶು ಮಲ್ಲಿಕ್, ಜೈಲಾ ನಾಗೀಜಡೆ, ನೈನಾ, ಸಭೀರಾ ಅಲಿಯೆವಾ ಅಲಹವರ್ಡಿ ಮೊದಲಾದ ಹೆಸರಾಮತ ಕುಸ್ತಿ ಪಟುಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ.

ನೋಂದಣಿ ; ಫೆಬ್ರವರಿ 22 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಕುಸ್ತಿಪಟುಗಳ ದೇಹ ತೂಕವನ್ನು ತೆಗೆದುಕೊಳ್ಳಲಾಗುವುದು.

ವಯೋಮಿತಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳು ಜನನ ನೋಂದಣಿ ಅಧಿಕಾರಿಗಳಿಂದ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಹಾಗೂ ಬ್ಯಾಂಕ್ ಖಾತೆಯ ಪ್ರತಿಯನ್ನು ತರಬೇಕು. ಸಾರಿಗೆ ವ್ಯವಸ್ಥೆ; ಫೆಬ್ರವರಿ 22 ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ವರೆಗೆ ಧಾರವಾಡದ ಕೇಂದ್ರಿಯ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಕರ್ನಾಟಕ ಕಾಲೇಜು ಮೈದಾನದವರೆಗೆ ಕುಸ್ತಿಪಟುಗಳ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ 94485 90935, 9964245769, 7892042714, 9481966245 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.

Comments are closed.