ಕರಾವಳಿ

ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಕದ್ರಿಯಲ್ಲಿ ಸಾವಿರಾರು ಭಕ್ತರಿಂದ ವಿಶೇಷ ಪೂಜೆ – ಅಭೀಷೆಕ

Pinterest LinkedIn Tumblr

ಮಂಗಳೂರು, ಫೆಬ್ರವರಿ. 21: ಇಂದು ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ. ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ಬೆಳಗ್ಗೆಯಿಂದಲೇ ನೂರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾವಿರಾರು ಭಕ್ತಾಧಿಗಳು ಸರದಿ ಸಾಲಿನಲ್ಲಿ ನಿಂತು ಮಂಜುನಾಥ ಸ್ವಾಮಿಗೆ ಅಭೀಷೆಕ ಮಾಡಿದರು. ಭಜನಾ ಸಂಕೀರ್ತನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

Comments are closed.