ಕರಾವಳಿ

ಶಾಸಕ ಕಾಮಾತ್ ಹಾಗೂ ಕೋಟ್ಯಾನ್ ಅವರ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಬಿಡುಗಡೆ

Pinterest LinkedIn Tumblr

ಮಂಗಳೂರು ಫೆಬ್ರವರಿ 23: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಮೂಡಬಿದಿರೆ ವಿಧಾನಸಭಾ ಕ್ಷೇತ್ರ ಶಾಸಕ ಉಮಾನಾಥ್ ಕೋಟ್ಯಾನ್ ಇವರ 2018-19ನೇ ಸಾಲಿನ ಅನುದಾನದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ತೋಕೂರು ಗ್ರಾಮದ ಲೈಟ್‍ಹೌಸ್ ಜಂಕ್ಷನ್‍ನಿಂದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರಸ್ತೆ ಡಾಮರೀಕರಣ ಕಾಮಗಾರಿಗೆ ರೂ. 4.18.632 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ ವೇದವ್ಯಾಸ್ ಕಾಮತ್ ಇವರ 2018-19ನೇ ಸಾಲಿನ ಅನುದಾನದಲ್ಲಿ ಮ.ನ.ಪಾ ವ್ಯಾಪ್ತಿಯ ವಿ.ನಂ.60 ಬೆಂಗ್ರೆ ವಾರ್ಡಿನ ವಿಷ್ಣು ವಿಠೋಭ ಭಜನಾ ಮಂದಿರ ಬಳಿ ಸಾರ್ವಜನಿಕ ವೇದಿಕೆ ನಿರ್ಮಾಣ ಕಾಮಗಾರಿಗೆ ರೂ 5 ಲಕ್ಷ , ಮ.ನ.ಪಾ ವ್ಯಾಪ್ತಿಯ ವಿ.ನಂ.30ನೇ ಕೋಡಿಯಾಲ್‍ಬೈಲ್‍ನ ಮಂಗಳೂರು ಜಿಲ್ಲಾ ನ್ಯಾಯಾಲಯದ ಮಹಿಳಾ ನ್ಯಾಯಾವಾದಿಗಳ ಕೊಠಡಿಗೆ ಮೂಲ ಸೌಕರ್ಯ ಒದಗಿಸಲು ರೂ 5 ಲಕ್ಷ, ಅನುದಾನ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.