ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಮಿನಿವಿಧಾನಸೌಧದೊಳಗಿರುವ ಕುಂದಾಪುರ ತಾಲ್ಲೂಕು ಕಚೇರಿಯಲ್ಲಿ ಹಾಗೂ ಮಿನಿ ವಿಧಾನ ಸೌಧದ ಆವರಣದೊಳಕ್ಕೆ ಪಾಕಿಸ್ತಾನ್ ಜಿಂದಾಬಾದ್ ಜಿಹಾದಿ ಜಿಂದಾಬಾದ್ ಎಂದು ಘೋಷಣೆ ಕೂಗಿ ಪೊಲೀಸರ ವಶವಾಗಿದ್ದ ಕುಂದಾಪುರ ಕೋಡಿ ನಿವಾಸಿ ರಾಘವೇಂದ್ರ ಗಾಣಿಗನ ಮೇಲೆ ದೇಶದ್ರೋಹದ ಕೇಸು ಹಾಕಲಾಗಿದೆ.
ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಪಾಕ್ ಪರ ಘೋಷಣೆ ಕೂಗಿದ ರಾಘವೇಂದ್ರ ಗಾಣಿಗನ ಮೇಲೆ ಕುಂದಾಪುರ ತಹಶಿಲ್ದಾರರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಕುಂದಾಪುರ ಪೊಲೀಸರು ರಾಘವೇಂದ್ರ ಗಾಣಿಗನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದರು. ಖುದ್ದು ಉಡುಪಿ ಎಸ್ಪಿ ವಿಷ್ಣುವರ್ಧನ್ ಕೂಡ ಕುಂದಾಪುರ ಠಾಣೆಗೆ ಆಗಮಿಸಿ ಆರೋಪಿ ವಿಚಾರಣೆ ನಡೆಸಿದ್ದರು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾ.16ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿರಿ-
ಕುಂದಾಪುರ ತಾಲೂಕು ಕಚೇರಿಯಲ್ಲಿ ಪಾಕ್ ಪರ ಘೋಷಣೆ ಕೂಗಿದವನ ಬಂಧನ(Video)
Comments are closed.