ಕರಾವಳಿ

ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಸನ್ಮಾನ

Pinterest LinkedIn Tumblr

ಮಂಗಳೂರು, ಮಾರ್ಚ್.08: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುತ್ತಿರುವ ಪತ್ರಕರ್ತರ 35ನೇ ಸಮ್ಮೇಳನದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಹಾಜಬ್ಬ ಅವರನ್ನು ಸನ್ಮಾನಿಸಿದರು.

ತಮ್ಮ ವರದಿಯ ಮೂಲಕ ಹಾಜಬ್ಬ ಅವರನ್ನು ಪರಿಚಯಿಸಿದ ಗುರುವಪ್ಪ ಎನ್.ಟಿ.ಬಾಳೆಪುಣಿ, ಯೋಗೀಶ್ ಹೊಳ್ಳ, ಗುರುರಾಜ ಪಣಿಯಾಡಿ, ಚಿದಂಬರ ಬೈಕಂಪಾಡಿ ಅವರನ್ನು ಗೌರವಿಸಲಾಯಿತು.

Comments are closed.