ಮಂಗಳೂರು: ವಿಜಯ ಕರ್ನಾಟಕ ಪತ್ರಿಕೆಯ ಮುಖ್ಯ ಉಪಸಂಪಾದಕ ಬಿ. ರವೀಂದ್ರ ಶೆಟ್ಟಿ ಬರೆದಿರುವ ‘ನಮ್ಮ ಮಂಗಳೂರು’ ಮಂಗಳೂರು ಮಹಾನಗರ ಪಾಲಿಕೆಯ ಸಮಗ್ರ ನೋಟ ಎಂಬ ಕೃತಿ ಮಂಗಳೂರು ಪುರಭವನದಲ್ಲಿ ನಡೆಯುತ್ತಿರುವ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಶನಿವಾರ ಬಿಡುಗಡೆಗೊಂಡಿತು.
ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರು ಕೃತಿಯನ್ನು ಲೋಕಾರ್ಪಣೆ ಮಾಡಿದರು.
ಕೃತಿಗೆ ಪ್ರೊ. ಬಿ. ಎ. ವಿವೇಕ ರೈ ಅವರು ಮುನ್ನುಡಿ ಬರೆದಿದ್ದು, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಬೆನ್ನುಡಿ ಬರೆದಿದ್ದಾರೆ. ವಿಜಯ ಕರ್ನಾಟಕ ಮಂಗಳೂರಿನ ಸ್ಥಾನೀಯ ಸಂಪಾದಕ ಯು. ಕೆ. ಕುಮಾರ್‌ನಾಥ್ ಅವರ ಆಶಯ ಮಾತುಗಳಿವೆ.
ಮಂಗಳೂರಿನ ಸಮಗ್ರ ಚಿತ್ರಣ:
ಈ ಗ್ರಂಥದಲ್ಲಿ ಮಂಗಳೂರಿನ ಜನಪ್ರತಿನಿಧಿಗಳು, ದಕ್ಷಿಣ ಕನ್ನಡ ಜಿಯ ಕಿರುನೋಟ, ಮಂಗಳೂರು ಮಹಾನಗರ ಪಾಲಿಕೆಯ ಪ್ರಮುಖ ಅಂಕಿಅಂಶಗಳು, ಮಂಗಳೂರಿನ ಆಡಳಿತದ ಇತಿಹಾಸ, ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿ ಆಡಳಿತ ನಡೆಸುವ ವ್ಯವಸ್ಥೆ ಸಮಗ್ರ ವಿವರಗಳಿವೆ.

Comments are closed.