ಕರಾವಳಿ

ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ

Pinterest LinkedIn Tumblr

ಮಂಗಳೂರು : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಹಿರಿಯ ಪತ್ರಕರ್ತರಿಗೆ ಜೀವಮಾನದ ವೃತ್ತಿ ಸಾಧನೆಗಾಗಿ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ದತ್ತಿ ನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹಿರಿಯ ಪತ್ರಕರ್ತರಾದ ತಿಮ್ಮಪ್ಪ ಭಟ್, ಪದ್ಮರಾಜ ದಂಡಾವತಿ, ಜಿ.ಎನ್.ಮೋಹನ್, ಅಬ್ಬೂರ್ ರಾಜಶೇಖರ,ಪೆ.ನಾ. ಗೋಪಾಲರಾವ್, ಮಹೇಶ್ ಅಂಗಡಿ, ಮನೋಹರ ಪ್ರಸಾದ್, ಆನಂದ ಶೆಟ್ಟಿ ಸೇರಿದಂತೆ ಪ್ರಶಸ್ತಿ ವಿಜೇತರಿಗೆ ರಾಜ್ಯ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ವಿತರಿಸಿದರು.

Comments are closed.