ಮಂಗಳೂರು; ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು,ಪಂಪ್ವೆಲ್ ಬಳಿಯಿರುವ ಕರ್ನಾಟಕ ಬ್ಯಾಂಕ್ ಮುಂಭಾಗದ ರಸ್ತೆ ಅಭಿವೃದ್ಧಿಪಡಿಸುವಂತೆ ಸಾರ್ವಜನಿಕರು ಸಲ್ಲಿಸಿದ ಮನವಿಯಂತೆ ಈ ಕಾಮಗಾರಿಗೆ 50 ಲಕ್ಷ ಅನುದಾನ ಒದಗಿಸಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.
ಈ ರಸ್ತೆ ಈಗ ಪೂರ್ಣ ಪ್ರಮಾಣದಲ್ಲಿ ಹದಗೆಟ್ಟಿದ್ದು ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗುವ ಬಗ್ಗೆ ಸ್ಥಳೀಯ ಕಾರ್ಯಕರ್ತರು ನನ್ನ ಗಮನಕ್ಕೆ ತಂದಿದ್ದರು. ಹಾಗಾಗಿ ಅಧಿಕಾರಿಗಳನ್ನು ಕಳಿಸಿ ಪರಿಸ್ಥಿತಿ ಅವಲೋಕಿಸಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಿಂದ ಮರೋಳಿ ಪಾಂಪುಮನೆ ಸಾಗುವ ಈ ರಸ್ತೆ ಅಭಿವೃದ್ಧಿಯಾದರೆ ಸ್ಥಳೀಯರಿಗೆ ಬಹಳಷ್ಟು ಅನುಕೂಲವಾಗಲಿದೆ. ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದ್ದು ಸ್ಥಳೀಯರ ಸಹಕಾರ ಬೇಕಿದೆ ಎಂದರು.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರವು ಅಭಿವೃದ್ಧಿಯ ಪಥದತ್ತ ನಾಗಲೋಟದಲ್ಲಿ ಸಾಗುತ್ತಿದೆ. ರಾಜ್ಯ ಸರಕಾರವು ಕೂಡ ಮಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಅನುದಾನಗಳನ್ನು ನೀಡುತ್ತಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಈಗಾಗಲೇ ರಾಜ್ಯ ಸರಕಾರವು ಮಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ರೀತಿಯ ಅನುದಾನಗಳನ್ನು ನೀಡಿದ್ದು ಮುಂದಿನ ದಿನಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗುವುದು ಎಂದಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರಾದ ಕೇಶವ ಮರೋಳಿ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಕಿರಣ್ ಮರೋಳಿ, ಜಗದೀಶ್ ಶೆಣೈ, ಪ್ರಶಾಂತ್ ಮರೋಳಿ, ಜಗನ್ನಾಥ್ ದೊಡ್ಡಮನೆ, ಪುರುಷೋತ್ತಮ ಸುವರ್ಣ, ಮಾಲತಿ, ಸರಳ, ಶೋಭಾ ಶೆಟ್ಟಿ, ಹೇಮಲತ ನಿಸರ್ಗ,ರಾಘು ಹಾಗೂ ಸೂರ್ಯನಾರಾಯಣ ದೇವಸ್ಥಾನದ ಪ್ರಮುಖರಾದ ಬಾಲಕೃಷ್ಣ ಕೊಟ್ಟಾರಿ ಸ್ಥಳೀಯ ಪ್ರಮುಖರಾದ ರಂಜಿತ್, ಬಾಲಕೃಷ್ಣ ಸುವರ್ಣ, ಸುಶಾಂತ್, ನವೀನ್, ನಾರಾಯಣ ವಯಿಲಾಯ,ರಾಮ ಪ್ರಸಾದ್, ಸತೀಶ್, ಯೋಗೀಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
Comments are closed.