ಮಂಗಳೂರು ಮಾರ್ಚ್ 15 : ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಇವರ ದ.ಕ. ಜಿಲ್ಲಾ ಪ್ರವಾಸ ಇಂತಿವೆ.
ಮಾರ್ಚ್ 16 ರಂದು ರಾತ್ರಿ 10 ಗಂಟೆಗೆ ಮಂಗಳೂರಿಗೆ ಆಗಮಿಸಿ ಪಿಡಬ್ಲ್ಯೂಡಿ ವಸತಿ ಗೃಹದಲ್ಲಿ ವಾಸ್ತವ್ಯ. 17 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ವಿಶ್ವವಿದ್ಯಾಯಲದಲ್ಲಿ ನಡೆಯುವ ಪ್ರಾಣಿ ಜೀವವೈವಿಧ್ಯ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12.15 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳು, ನಗರಕೋಶ ಮುಖಸ್ಥರು, ಸಿಆರ್‍ಝಡ್ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಾಲಿನ್ಯ ನಿಯಂತ್ರಣ ಅಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಟೆರಿಟೋರಿಯಲ್, ಬಂದರು ಇಲಾಖೆ ಅಧಿಕಾರಿ, ಪಿಲಿಕುಳ ನಿಸರ್ಗಧಾಮದ ಅಧಿಕಾರಿಗಳ ಜೊತೆಗೆ ಜೀವವೈವಿಧ್ಯ ಸಂರಕ್ಷಣೆ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಮಧ್ಯಾಹ್ನ 1.15 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮಧ್ಯಾಹ್ನ 2.45 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಾಮಾಜಿಕ ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಜಿಲ್ಲಾ ತೋಟಗಾರಿಕೆ ಅಧಿಕಾರಿ, ಜಿಲ್ಲಾ ಕೃಷಿ ಅಧಿಕಾರಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿಯ ಕಾರ್ಯವಿರ್ವಹಣಾಧಿಕಾರಿಗಳ ಜೊತೆ ಜೀವವೈವಿಧ್ಯ ಸಂರಕ್ಷಣೆ, ಅಭಿವೃದ್ಧಿ ಕರಿತು ಸಮಾಲೋಚನೆ ನಡೆಸಲಿದ್ದಾರೆ.
ಸಂಜೆ 4.15 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಮೀಷನರ್ ಹಾಗೂ ಮಹಾನಗರಪಾಲಿಕೆಯ ಜೀವವೈವಿಧ್ಯ ನಿರ್ವಹಣಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರ ಜೊತೆ ಸಮಾಲೋಚನೆ ನಡೆಸಿ, ರಾತ್ರಿ ಕೇಂದ್ರ ಸ್ಥಾನಕ್ಕೆ ತೆರಳಲಿದ್ದಾರೆ.

Comments are closed.