ಕರಾವಳಿ

ಮಾಸ್ಕ್ ಕೊರತೆ ಹಿನ್ನೆಲೆ – ಮಾ.17ರಿಂದ ಎಲ್ಲಾ ಆಸ್ಪತ್ರೆಗಳಿಗೆ ಮಾಸ್ಕ್ ವಿತರಿಸಲು ಕ್ರಮ : ಸಚಿವ ಶ್ರೀನಿವಾಸ ಪೂಜಾರಿ

Pinterest LinkedIn Tumblr

ಮಂಗಳೂರು : ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಮಾ.17ರಿಂದ ಮಾಸ್ಕ್ (ಮುಖಗವಸು) ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೊರೋನ ವೈರಸ್ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ವಾರ ಶಂಕಿತ ಜ್ವರದಿಂದ ಒಬ್ಬರು ದಾಖಲಾಗಿದ್ದರು. ಆದರೆ ಅಲ್ಲಿ ಅಗತ್ಯವಿರುವಷ್ಟು ಮಾಸ್ಕ್ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಿಯೂ ಕೂಡ ಮಾಸ್ಕ್ ಕೊರತೆ ತಲೆದೋರದಂತೆ ನೊಡಿಕೊಳ್ಳಬೇಕು ಎಂದು ಸಚಿವ ಕೋಟ ಜಿಲ್ಲಾ ಆರೋಗ್ಯಾ ಧಿಕಾರಿಗೆ ನಿರ್ದೇಶನ ನೀಡಿದರು.

Comments are closed.