ಮಂಗಳೂರು; ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಜಾತ್ರೆ, ನೇಮೋತ್ಸವ, ಯಕ್ಷಗಾನ ಪ್ರದರ್ಶನ ಸಹಿತ ಧಾರ್ಮಿಕ ಕಾರ್ಯಕ್ರಮಗಳಿಗೆ ತಡೆ ನೀಡುವ ಅಗತ್ಯವಿಲ್ಲ. ಇವು ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಅದಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಬೇಕು ಎಂದು ಸಂಸದ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.
ಕೊರೋನ ವೈರಸ್ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಮಾನದಂಡವನ್ನು ಮಸೀದಿ ಹಾಗೂ ಚರ್ಚ್‌ಗಳ ಕಾರ್ಯಕ್ರಮಕ್ಕೂ ಅನ್ವಯಿಸಬೇಕು. ಇಲ್ಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಜನಸೇರದಂತೆ ನೋಡಿಕೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
Comments are closed.