ಕುಂದಾಪುರ: ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಿ ಹೋಗಿದ್ದ ಶಂಕಿತ ಕರೋನ ವ್ಯಕ್ತಿಯನ್ನು ಪೊಲೀಸರು ಶೀಘ್ರ ಪತ್ತೆ ಹಚ್ಚಿ ವೈದ್ಯರ ಮುಂದೆ ಹಾಜರುಪಡಿಸಿದ್ದು ಸದ್ಯ ಆತನಿಗೆ ಕಡ್ಡಾಯ ಹೋಂ ಕ್ವಾರಂಟೈನ್ ವಿಧಿಸಲಾಗಿದೆ.

ಸಾರ್ವಜನಿಕರು ಯಾವುದೇ ಆತಂಕ ಪಡದಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಇಂದು ಮಧ್ಯಾಹ್ನ ಕುಂದಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಈ ವ್ಯಕ್ತಿ ವಿದೇಶದಿಂದ ವಾಪಾಸ್ ಆಗಿದ್ದರು. ಐಸೋಲೆಟೆಡ್ ವಾರ್ಡ್‌ನಲ್ಲಿ ಚಿಕಿತ್ಸೆ ಕೊಡಬೇಕು ಎಂದಾಗ ವೈದ್ಯರ ಹಾಗೂ ಸಿಬ್ಬಂದಿಗಳ ಮನವಿಗೂ ಸ್ಪಂದಿಸದೇ ಪರಾರಿಯಾಗಿದ್ದರು.
(ವರದಿ- ಯೋಗೀಶ್ ಕುಂಭಾಸಿ)
Comments are closed.