ಮಂಗಳೂರು, ಮಾರ್ಚ್.24: ಕೊರೋನ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಸಾಂಕ್ರಾಮಿಕ ರೋಗಗಳ ವೈರಾಣು ನಾಶಕ್ಕೆ ಕ್ರಿಮಿನಾಶಕ ಸಿಂಪಡಣೆ ಕಾರ್ಯಕ್ರಮ ಆರಂಭಿಸಲಾಗಿದೆ.
ಮಹಾನಗರಪಾಲಿಕೆ ಮುಂಭಾಗದಲ್ಲಿ ಕ್ರಿಮಿನಾಶಕ ಸಿಂಪಡಣೆಗೆ ಮೇಯರ್ ದಿವಾಕರ ಪಾಂಡೇಶ್ವರ ಅವರು ಚಾಲನೆ ನೀಡಿದರು. ಈ ಸಂದರ್ಭ ಉಪ ಮೇಯರ್ ವೇದಾವತಿ, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಜಂಟಿ ಆಯುಕ್ತ ಡಾ.ಸಂತೋಷ್ ಕುಮಾರ್ ಹಾಗೂ ಮನಪಾ ಸದಸ್ಯರು ಉಪಸ್ಥಿತರಿದ್ದರು.





Comments are closed.