ಕರಾವಳಿ

ಜಿಲ್ಲೆಯಲ್ಲಿ 7 ಕರೋನ ಸೊಂಕು ದೃಡ : ನಾಳೆ ದ.ಕ.ಜಿಲ್ಲೆ ಸಂಪೂರ್ಣ ಬಂದ್

Pinterest LinkedIn Tumblr

ಮಂಗಳೂರು, ಮಾರ್ಚ್.27; ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರ ಗಳು ಸಂಫೂರ್ಣ ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬಂಟ್ವಾಳ ತಾಲೂಕಿನ ಸಜಿಪ ನಡು ಹಾಗೂ ಬೆಳ್ತಂಗಳಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕರೋನ ಏಳು ಪ್ರಕರಣಗಳು ವರದಿಯಾಗಿದೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿವೆ. ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸದಿದ್ದರೆ ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಿ ಪರಿಣಾಮಿಸ ಬಹುದು. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರು ಬೆಂಬಲಿಸಬೇಕು ಎಂದು ಮನವಿ ಮಾಡಲಾಗಿದೆ.

ಸಭೆಯಲ್ಲಿ ಸಂಸದರು, ಜಿಲ್ಲೆಯ ಶಾಸಕರು, ಜಿ.ಪಂ. ಅಧ್ಯಕ್ಷರು, ಮೇಯರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.