ಕರಾವಳಿ

ಕೊರೊನ ಕ್ವಾರಂಟೈನ್ ಮಾಹಿತಿಗೆ ಜಿಪಿಎಸ್ ಆಧಾರಿತ ಆಪ್ ಬಳಕೆಗೆ ಬೆಳ್ತಂಗಡಿ ಸಜ್ಜು… ಇದು ದೇಶದಲ್ಲೇ ಮೊದಲು!

Pinterest LinkedIn Tumblr

ಮಂಗಳೂರು: ಕೊರೊನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕೇಂದ್ರ ರಾಜ್ಯ ಸರಕಾರಗಳು ಆತಂಕಕ್ಕೆ ಒಳಗಾಗಿವೆ. ದಿನದಿಂದ ದಿನಕ್ಕೆ ಸೋಂಕಿತರು ಹೆಚ್ಚಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಸಾವಿರಾರು ಮಂದಿ ಹೋಮ್ ಕ್ವಾರಂಟೈನ್ ಅಂದರೆ ಮನೆಯಲ್ಲೇ ನಿಗಾ ವ್ಯವಸ್ಥೆ ಮೂಲಕ ಇದ್ದಾರೆ. ಆದರೆ ಇತ್ತೀಚಿನ ಕೆಲವು ದಿನಗಳಿಂದ ಹೀಗೆ ಹೋಮ್ ಕ್ವಾರಂಟೈನ್ ಆಗಿರುವ ಕೆಲವು ಮಂದಿ ಸ್ಟ್ಯಾಂಪ್ ಹಾಕಿದ್ದೂ ಬೇಕಾಬಿಟ್ಟಿ ಓಡಾಟ ನಡೆಸುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ.

ಇವರನ್ನು ಮನೆಯಲ್ಲೇ ನಿಗಾ ಇರಿಸಲು ಕುಟುಂಬ, ಪೊಲೀಸರು,ಆಶಾ ಕಾರ್ಯಕರ್ತರು, ವೈದ್ಯರು ಹರಸಾಹಸ ಪಡುತ್ತಿರುವ ಹಿನ್ನೆಲೆಯಲ್ಲಿ *ಬೆಳ್ತಂಗಡಿ ತಾಲೂಕು ಆಡಳಿತ, ಶ್ರಮಿಕ ಬೆಳ್ತಂಗಡಿ ಶಾಸಕರ ಕಚೇರಿ ಹಾಗೂ ಐ-ಸರ್ಚ್ ಕಂಪೆನಿಯ* ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಜಿಪಿಎಸ್ ಆಧಾರಿತ ಆಪ್ ಬಳಸಿ ನಿಗಾ ವಹಿಸುವ ಕಾರ್ಯಕ್ಕೆ ಮುಂದಾಗಿದೆ. ತಾಲೂಕಿನಲ್ಲಿ ಮಾತ್ರವಲ್ಲದೆ ದೇಶದಲ್ಲೇ ಮೊದಲ ಪ್ರಯತ್ನ ಇದಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಈ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.

ಈಗಾಗಲೇ ಇದರ ಪೂರ್ವ ಸಿದ್ಧತೆ ಮುಗಿದಿದ್ದು ತಾಲೂಕಿನಲ್ಲಿ ಒಂದು ಕೋವಿಡ್ 19 ಪ್ರಕರಣ ಬೆಳಕಿಗೆ ಬಂದ ಬಳಿಕ ಹೋಮ್ ಕ್ವಾರಂಟೈನ್ ಆಗಿರುವವರ ಮೇಲೆ ನಿಗಾ ಇರಿಸಲು ಈ ವ್ಯವಸ್ಥೆ ನೆರವಾಗಲಿದೆ. ಜಿಪಿಎಸ್ ಆಧಾರಿತ ಆಪ್ ಮೂಲಕ ವಾರ್ ರೂಮಲ್ಲಿ ಕೂತು ಹೋಮ್ ಕ್ವಾರಂಟೈನ್ ಆಗಿರುವವರು ಎಲ್ಲಿದ್ದಾರೆ ಹೇಗಿದ್ದಾರೆ ಮತ್ತು ಅವರ ಭಾವಚಿತ್ರ ಸಹಿತ ಮಾಹಿತಿಯನ್ನು ಇದರಿಂದ ಪಡೆಯಬಹುದಾಗಿದೆ. ಸದ್ಯ ಇದನ್ನು ಬೆಳ್ತಂಗಡಿ ತಾಲೂಕಿನಲ್ಲಿ ಜಾರಿಗೆ ತರಲಾಗುತ್ತಿದ್ದು ಇನ್ನು ಮುಂದೆ ರಾಜ್ಯದಲ್ಲಿ ಜಾರಿಗೆ ತರಲು ಚಿಂತಿಸಲಾಗಿದೆ.

Comments are closed.