ಕರಾವಳಿ

ವಾಟ್ಸಾಪ್‌ಗಳಲ್ಲಿ ಸುಳ್ಳು ಸುದ್ದಿ ಫಾರ್ವರ್ಡ್ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ : ಪೊಲೀಸ್ ಕಮಿಶನರ್ ಎಚ್ಚರಿಕೆ

Pinterest LinkedIn Tumblr

ಮಂಗಳೂರು, ಮಾರ್ಚ್.30: ವಾಟ್ಸಾಪ್ ಗ್ರುಪ್ ಗಳಲ್ಲಿ ಸುಳ್ಳು ಸುದ್ದಿ ಫಾರ್ವರ್ಡ್ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರ ಸಾರ್ವಜನಿಕ ಅಧಿಕಾರಿಗಳ ಹೆಸರಿನಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳು, ವದಂತಿಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಫಾರ್ವರ್ಡ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅಧಿಕೃತವಾಗಿ ಅಧಿಕಾರಿಗಳಿಂದ ನೀಡಲಾದ ಸುದ್ದಿಗಳನ್ನಷ್ಟೇ ಜನರು ನಂಬಬೇಕು. ಅಧಿಕೃತರಿಂದ ಸಹಿ ಮಾಡಲಾದ ಪತ್ರಿಕಾ ಪ್ರಕಟನೆ ಅಥವಾ ಟ್ವಿಟರ್ ಮೂಲಕ ನೀಡಲಾದ ಹೇಳಿಕೆಗಳನ್ನು ಮಾತ್ರವೇ ಜನರು ಪರಿಗಣಿಸಬೇಕು ಎಂದು ಮನವಿ ಮಾಡಿರುವ ಪೊಲೀಸ್ ಆಯುಕ್ತರು ಈಗಾಗಲೇ ಪ್ರಕರಣವೊಂದಕ್ಕೆ ಸಂಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Comments are closed.