ಮಂಗಳೂರು; ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಭೆ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ವೆನಲಾಕ್ ಆಸ್ಪತ್ರೆ ಕೋವಿಡ್ 19 ಆಸ್ಪತ್ರೆಯಾಗಿ ಪರಿವರ್ತನೆಗೊಂಡಿರುವುದರಿಂದ ವೆನಲಾಕ್ ಆಸ್ಪತ್ರೆಗೆ ಡಯಾಲೀಸಿಸ್ ಚಿಕಿತ್ಸೆಗೆ ಬರುತ್ತಿದ್ದ ರೋಗಿಗಳಿಗೆ ಮತ್ತು ಹೊರರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಮಾಲೀಕರು ಸಮ್ಮತಿಸಿದ್ದಾರೆ. ಅನಿವಾರ್ಯವಾದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ನೀಡಲು ಕೂಡ ಒಪ್ಪಿದ್ದಾರೆ.
ಅವರೆಲ್ಲರಿಗೂ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಧನ್ಯವಾದ ಸಲ್ಲಿಸಿದ್ದಾರೆ. ಜಿ.ಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವೆನಲಾಕ್ ಡಿಎಂಒ ಉಪಸ್ಥಿತರಿದ್ದರು.

Comments are closed.