ಮಂಗಳೂರು, ಮಾರ್ಚ್.31 : ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಬೆಳಗ್ಗೆ 7 ರಿಂದ 12 ಗಂಟೆಯವರೆಗೆ ದಿನಸಿ ಅಂಗಡಿ, ತರಕಾರಿ, ಹಣ್ಣುಹಂಪಲುಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ನಗರಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎ.1, ಬುಧವಾರದಿಂದ ಎಲ್ಲಾ ದಿನಸಿ ಅಂಗಡಿ, ತರಕಾರಿ, ಹಣ್ಣುಹಂಪಲುಗಳ ಅಂಗಡಿಗಳನ್ನು ಬೆಳಗ್ಗೆ 7 ರಿಂದ 12 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಹಾಲು, ಮೆಡಿಕಲ್, ಗ್ಯಾಸ್ ವಿತರಣೆ, ಪೆಟ್ರೋಲ್ ಪಂಪ್, ಬ್ಯಾಂಕ್ ಗಳು ಎಂದಿನಂತೆ ಕಾರ್ಯಾಚರಿಸುತ್ತದೆ ಎಂದು ತಿಳಿಸಿದರು..
ಕೇಂದ್ರ ಮಾರುಕಟ್ಟೆ ಮತ್ತು ಸುರತ್ಕಲ್ ಮಾರುಕಟ್ಟೆ ಸಾರ್ವಜನಿಕರ ಪ್ರವೇಶವನ್ನಿ ನಿರ್ಬಂಧಿಸಲಾಗಿದೆ ಎಂದು ಸಚಿವ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮಾತ್ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಉಪಸ್ಥಿತರಿದ್ದರು.

Comments are closed.