ಕರಾವಳಿ

ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದ.ಕ. ಜಿಲ್ಲೆಯ 21 ಮಂದಿಗೆ ಆಸ್ಪತ್ರೆಯಲ್ಲೇ ಕ್ವಾರಂಟೈನ್

Pinterest LinkedIn Tumblr

ಮಂಗಳೂರು, ಎಪ್ರಿಲ್.02: ದೆಹಲಿ ನಿಝಾಮುದ್ದೀನ್ ನಲ್ಲಿ ನಡೆದ ತಬ್ಲೀಗ್ ಧಾರ್ಮಿಕ ಕಾರ್ಯಕ್ರಮ ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 21 ಮಂದಿ ಭಾಗವಹಿಸಿದ್ದಾರೆ. ಇವರೆಲ್ಲರನ್ನೂ ಸಂಪರ್ಕಿಸಿ, ಅವರನ್ನು ಆಸ್ಪತ್ರೆ ನಿಗಾವಣೆ ಕೇಂದ್ರದಲ್ಲಿಡಲಾಗಿದೆ. ಅವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗು ತ್ತಿದ್ದು, ಗಂಟಲ ದ್ರವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಪ್ರಕರಣದ ಕುರಿತು ಪರಿಶೀಲನೆ ಮುಂದುವರಿದಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Comments are closed.