ಮಂಗಳೂರು, ಎಪ್ರಿಲ್.03: ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪಡಿತರದಲ್ಲಿ ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಇದೀಗ ಲಭ್ಯವಿರುವ 20000 ಕ್ವಿಂಟಾಲ್ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
Comments are closed.