ಮಂಗಳೂರು ಏಪ್ರಿಲ್ 08 ; ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಕೊರೋನಾ ಪರಿಸ್ಥಿತಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಗೃಹರಕ್ಷಕ ದಳ ಸಿಬ್ಬಂದಿಗಳಿಗೆ ಮಂಗಳೂರಿನ ದಂತ ವೈದ್ಯ ಡಾ. ಅಶ್ವತ್ಥ್ ಕುಮಾರ್ ಅವರ ಪ್ರಾಯೋಜಕತ್ವ ದಲ್ಲಿ 100 ಮುಖಕವಚ(ಮಾಸ್ಕ್) ಮತ್ತು 100 ಸ್ಯಾನಿಟೈಸರ್‍ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಡಾ: ಅಶ್ವತ್ಥ್ ಮಾತನಾಡಿ, ಕೊರೋನಾ ವೈರಸ್‍ನಿಂದ ರಕ್ಷಿಸಲು ಮುಖಕ್ಕೆ ಮಾಸ್ಕ್ ಧರಿಸಬೇಕು ಮತ್ತು ಸ್ವಚ್ಛತೆಗಾಗಿ ಸ್ಯಾನಿಟೈಸರ್‍ನ್ನು ಬಳಸಬೇಕು ಹಾಗೂ ಕೊರೋನಾ ಮಹಾಮಾರಿಯಿಂದ ನಮ್ಮನ್ನು ನಾವು ಮೊದಲು ರಕ್ಷಿಸಿಕೊಳ್ಳಬೇಕು ಎಂದು ಗೃಹರಕ್ಷಕರಿಗೆ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಡಾ|| ಮುರಲೀ ಮೋಹನ ಚೂಂತಾರು ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ದರ್ಜೆ ಸಹಾಯಕಿ ಅನಿತಾ ಉಪಸ್ಥಿತರಿದ್ದರು. ಹಿರಿಯ ಗೃಹರಕ್ಷಕ ರಮೇಶ್ ಭಂಡಾರಿ ವಂದಿಸಿದರು.

Comments are closed.