ಕರಾವಳಿ

ಕಾರ್ಮಿಕರಿಂದ ಬಾಡಿಗೆ ವಸೂಲಿ ಮಾಡಿದಲ್ಲಿ ಪರವಾನಗಿ ರದ್ದು- ಜಿಲ್ಲಾಧಿಕಾರಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಕೋವಿಡ್2019 (ಕೊರೋನಾ ವೈರಸ್ ಕಾಯಿಲೆ) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144(3) ರಂತೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಕಾರ್ಮಿಕರ ಶೆಡ್ ಹಾಗೂ ಬಾಡಿಗೆ ಮನೆಗಳಲ್ಲಿ ವಾಸವಿರುವ ಬಾಡಿಗೆದಾರರಿಂದ ಮಾರ್ಚ್,ಏಪ್ರಿಲ್ ಮಾಹೆಯ ಎರಡು ತಿಂಗಳ ಮನೆ/ಶೆಡ್ ಒದಗಿಸಿರುವ ಮನೆ ಮಾಲೀಕರು ಬಾಡಿಗೆ ಶುಲ್ಕವನ್ನು ವಸೂಲು ಮಾಡದಂತೆ ಎಚ್ಚರಿಸಿ ಒಂದು ವೇಳೆ ಬಾಡಿಗೆ ವಸೂಲಿ ಮಾಡಿದ್ದಲ್ಲಿ ಸಂಬoಧಪಟ್ಟ ಮನೆ ಮಾಲೀಕರ ವಿರುದ್ದ ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವುದಾಗಿ ಈಗಾಗಲೇ ಪತ್ರಿಕೆಯಲ್ಲಿ ಪ್ರಕಟನೆಯನ್ನು ನೀಡಲಾಗಿದೆ.

ಆದರೆ ಮನೆ/ಶೆಡ್ ಒದಗಿಸಿರುವ ಮನೆ ಮಾಲೀಕರು ಬಾಡಿಗೆ ಶುಲ್ಕಗಳನ್ನು ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗುತ್ತಿರುವುದರಿಂದ ಈ ಆದೇಶವನ್ನು ಹೊರಡಿಸಿದ್ದರೂ ಕೂಡ, ಮನೆ ಬಾಡಿಗೆ ಶುಲ್ಕಗಳನ್ನು ವಸೂಲು ಮಾಡುತ್ತಿರುವ ಶೆಡ್/ಮನೆ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ ಅವರಿಗೆ ನೀಡಲಾಗಿರುವ ಸ್ಥಳೀಯ ಸಂಸ್ಥೆಗಳ ವತಿಯಿಂದ ನೀಡಲಾಗಿರುವ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

Comments are closed.