ಕುಂದಾಪುರ: ಕೋರೋನಾ ತಡೆಗಟ್ಟುವ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೂಡ ಜನರು ಸುಖಾಸುಮ್ಮನೆ ರಸ್ತೆಗಿಳಿಯುವುದು ನಿಂತಿಲ್ಲ. ಅದಕ್ಕಾಯೇ ಸಕಾರಣವಿಲ್ಲದೆ ರಸ್ತೆಗಿಳಿಯುವ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ನೋಟಿಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ.
ಕುಂದಾಪುರ ಪೊಲೀಸ್ ಉಪವಿಭಾಗದ ಎಲ್ಲಾ ಠಾಣೆಗಳಲ್ಲೂ ಪೊಲೀಸರು ವಾಹನ ವಶಕ್ಕೆ ಪಡೆಯುವ ಕಾರ್ಯ ಮಾಡುತ್ತಿದ್ದಾರೆ. ಕುಂದಾಪುರ ನಗರ ಠಾಣೆಯಲ್ಲಿ ಪಿಎಸ್ಐ ಹರೀಶ್ ಆರ್. ನಾಯ್ಕ್ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಠಾಣಾ ವ್ಯಾಪ್ತಿಯ ವಿವಿದೆಡೆ ಕಾರ್ಯಾಚರಣೆ ನಡೆಸುತ್ತಿದ್ದು ಒಟ್ಟು 13 ದ್ವಿಚಕ್ರ ವಾಹನಗಳು, ಒಂದು ಇನ್ನೋವಾ ಕಾರು ಹಾಗೂ ಒಂದು ಸ್ವಿಫ್ಟ್ ಕಾರು ವಶಕ್ಕೆ ಪಡೆಯಲಾಗಿದೆ.
ಇನ್ನು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಎಸ್ಐ ಶ್ರೀಧರ್ ನಾಯ್ಕ್ ನೇತೃತ್ವದಲ್ಲಿ 18 ದ್ವಿಚಕ್ರ ವಾಹನಗಳು ಮತ್ತು 2 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ವಶಕ್ಕೆ ಪಡೆದ ವಾಹನಗಳ ಸಂಬಂಧಪಟ್ಟವರಿಗೆ ನೋಟಿಸ್ ನೀಡಲಾಗುತ್ತದೆ. ಲಾಕ್ ಡೌನ್ ಮುಗಿಯುವವರೆಗೆ ವಾಹನಗಳು ಪೊಲೀಸರ ಸುಪರ್ಧಿಯಲ್ಲಿಯೇ ಇರಲಿದೆ. ಬಳಿಕ ವಾಹನದ ಮಾಲಿಕರು ದಂಡ ಕಟ್ಟಿ ವಾಹನವನ್ನು ಪಡೆಯಬೇಕಿದೆ.
(ವರದಿ- ಯೋಗೀಶ್ ಕುಂಭಾಸಿ)
Comments are closed.