ಮಂಗಳೂರು : ದೇಶದೆಲ್ಲೆಡೆ ಲಾಕ್ ಡೌನ್ ಆದೇಶ ಜಾರಿಗೊಂಡಿದ್ದು, ಅಗತ್ಯ ವಸ್ತುಗಳನ್ನು ಪಡೆಯಲು ಗ್ರಾಹಕರು ಪರದಾಡುತ್ತಿದ್ದಾರೆ. ಇದನ್ನು ದುರುಪಯೋಗಪಡಿಸಿಕೊಂಡು ಯಾರಾದರೂ ವ್ಯಾಪಾರಿಗಳು ಅಗತ್ಯ ವಸ್ತುಗಳಿಗೆ ನಿಗದಿಗಿಂತ ಹೆಚ್ಚಿನ ದರ ಪಡೆದಲ್ಲಿ ವ್ಯಾಪಾರಿಗಳ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿದೇಶದೆಲ್ಲೆಡೆ ಕಡ್ಡಾಯ ಲಾಕ್ ಡೌನ್ ಆದೇಶವಿರುವುದರಿಂದ ಗ್ರಾಹಕರು ಅಗತ್ಯ ವಸ್ತುಗಳನ್ನು ಪಡೆಯಲುಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗ್ರಾಹಕರನ್ನು ಸುಳಿಗೆ ಮಾಡುವ ಬಗ್ಗೆ ದೂರುಗಳು ಬರುತ್ತಿದೆ. ಕೆಲವು ವ್ಯಾಪಾರಿಗಳು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವ ಯತ್ನ ನಡೆಸುತ್ತಿದ್ದಾರೆ. ಅವರಿಂದಾಗಿ ಮೊದಲೇ ಕಷ್ಟದಲ್ಲಿರಿವ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಹಿನ್ನೆಲೆಯಲ್ಲಿ ನಿಗದಿಗಿಂತ ಹೆಚ್ಚಿನ ದರ ಪಡೆಯುವ ವ್ಯಾಪಾರಿಗಳ ಬಗ್ಗೆ ದೂರು ಬಂದರೆ ಅವರ ಲೈಸನ್ಸ್ ರದ್ದುಗೊಳಿಸುವುದಾಗಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಲಾಕ್ ಡೌನ್ ನಿಂದಾಗಿ ಎಲ್ಲೆಡೆ ಜನರು ಸಂಕಷ್ಟದಲ್ಲಿದ್ದಾರೆ. ಜನತೆ ತೊಂದರೆಯನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ಯಾರೂ ಕೂಡ ಜನಸಾಮಾನ್ಯರನ್ನು ದರೋಡೆ ಮಾಡುವ ಯತ್ನ ಮಾಡಬಾರದು. ಒಂದೊಮ್ಮೆ ಅಂತಹ ಘಟನೆಗಳು ನಡೆದರೆ ಅಥವಾ ನಮಗೆ ಆ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಎಚ್ಚರಿಕೆ ನೀಡಿದ್ದಾರೆ.

Comments are closed.