ಕರಾವಳಿ

ಇಂದಿನಿಂದ ಸಾಂಪ್ರದಾಯಿಕ ಹಾಗೂ ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ ; ಸಚಿವ ಕೋಟ

Pinterest LinkedIn Tumblr

ಮಂಗಳೂರು ; ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಗೆ ಇಂದಿನಿಂದ ಜಾರಿಗೆ ಬರುವಂತೆ ಅವಕಾಶ ಕಲ್ಪಿಸಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 14 ಸಾವಿರ ನಾಡದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳಿದ್ದು, ಅವುಗಳೆಲ್ಲ ಮೀನುಗಾರಿಕೆಗೆ ತೊಡಗಿಸಿಕೊಳ್ಳಲಿದೆ. ಕರೋನ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು ಮಾರಾಟ ಮಾಡಬೇಕೆಂದು ವಿನಂತಿ ಎಂದು ಸನ್ಮಾನ್ಯ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.