ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂತ್ರಸ್ತರಾಗಿರುವ ಕಾವೂರು 4ನೇ ಮೈಲು ಮುಲ್ಲಕಾಡು ಡಾ. ಬಿ. ಆರ್ ಅಂಬೇಡ್ಕರ್ ನಗರದ ಪ್ರದೇಶದ ಹಿಂದೂಳಿದ ಬಡ ಕುಟುಂಬಗಳಿಗೆ ದಿನಬಳಕೆ ದಿನಸಿ ಸಾಮಾಗ್ರಿಗಳನ್ನು ಹಾಗೂ ಕೊರೊನಾ ಮುಂಜಾಗ್ರತೆಗಾಗಿ ಮಾಸ್ಕ್‌ಗಳನ್ನು ವಿತರಿಸಲಾಯಿತು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಚೇರ್‌ಮೆನ್ ಸಿಎ ಶಾಂತಾರಾಮ ಶೆಟ್ಟಿ , ಆಡಳಿತ ಸಮಿತಿ ಸದಸ್ಯ ಯತೀಶ್ ಬೈಕಂಪಾಡಿ ಹಾಗೂ ಇತರರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಘಟಕವು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ರಕ್ತದ ಕೊರತೆಯಾಗದಂತೆ ಜಿಲ್ಲಾಕಾರಿಯವರ ವಿಶೇಷ ಅನುಮತಿಯೊಂದಿಗೆ ರಕ್ತದಾನ ಶಿಬಿರಗಳನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು, ರಕ್ತದ ಕೊರತೆಯನ್ನು ನೀಗಿಸುತ್ತಿದೆ. ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಿಟಿ ಕಂಟ್ರೋಲ್ ರೂಮ್‌ನಲ್ಲಿ ರೆಡ್‌ಕ್ರಾಸ್ ಸೇವಾಕರ್ತರು ನಿರಂತರ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಜಿಲ್ಲೆಯಲ್ಲಿ ಬಂದು ದುಡಿಯುತ್ತಿರುವ ಹೊರ ರಾಜ್ಯ, ಜಿಲ್ಲೆಯ ಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳ ಕಿಟ್‌ಗಳನ್ನು, ಮಾಸ್ಕ್ ಹಾಗೂ ಸೆನಿಟೈಸರ್‌ಗಳನ್ನು ವಿತರಿಸುವ ಕೆಲಸವನ್ನು ಮಾಡುತ್ತಿದ್ದೆ.
ಯಾವುದೇ ತುರ್ತು ಸಂದರ್ಭದಲ್ಲಿ ಅಗತ್ಯ ಸೇವಾ ಕಾರ್ಯಗಳಿಗೆ ರೆಡ್‌ಕ್ರಾಸ್ ಸಂಸ್ಥೆಯ ಸೇವಾಕರ್ತರು ಜಿಲ್ಲಾಡಳಿತದೊಂದಿಗೆ ಕೈಜೋಡಿಸುತ್ತಿದ್ದಾರೆ. ಲಾಕ್‌ಡೌನ್ ಸಂದರ್ಭ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಹಾಗೂ ಪೊಲೀಸರಿಗೆ ರೆಡ್‌ಕ್ರಾಸ್ ವತಿಯಿಂದ ಮಾಸ್ಕ್‌ಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದು ರೆಡ್‌ಕ್ರಾಸ್ ಸಾರ್ವಜನಿಕ ಸಂಪರ್ಕ ಘಟಕದ ಅಧ್ಯಕ್ಷ ಬಿ. ರವೀಂದ್ರ ಶೆಟ್ಟಿ ತಿಳಿಸಿದ್ದಾರೆ.
Comments are closed.