ಕರಾವಳಿ

ಮಂಗಳೂರು ಮಹಾನಗರ ಪಾಲಿಕೆಯ ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಸಿವಿಲ್ ಎಂಜಿನಿಯರಿಂಗ್ ಅಸೋಸಿಯೇಷನ್ ಹಾಗೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ವತಿಯಿಂದ ಪಾಲಿಕೆಯ ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಕಾರ್ಮಿಕರಿಗೆ ದಿನಸಿ ಸಾಮಾಗ್ರಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರ ಸಮ್ಮುಖದಲ್ಲಿ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಮೂಲಕ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ 240 ಪೌರ ಕಾರ್ಮಿಕರಿಗೆ, ನೀರು ಸರಬರಾಜು ಇಲಾಖೆಯಲ್ಲಿರು 180 ತಾತ್ಕಾಲಿಕ ಕಾರ್ಮಿಕರಿಗೆ, ಒಳ ಚರಂಡಿ ಜಾಲ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ 150 ತಾತ್ಕಾಲಿಕ ಕಾರ್ಮಿಕರಿಗೆ, ಎಂ.ಪಿ.ಡಬ್ಲ್ಯೂ 85 ಕಾರ್ಮಿಕರು, 25 ವಾಹನ ಚಾಲಕರು,100 ಆಶಾ ಕಾರ್ಯಕರ್ತರಿಗೆ, 110 ಅಂಗನವಾಡಿ ಕಾರ್ಯಕರ್ತೆಯರಿಗೆ, 35 ವೆನ್ಲಾಕ್ ಆಸ್ಪತ್ರೆಯಲ್ಲಿ ದಿನಕೂಲಿ ಕಾರ್ಮಿಕರಿಗೆ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು ಎಂದರು.

ಮಂಗಳೂರು ನಗರದಲ್ಲಿರುವ ಸಿವಿಲ್ ಎಂಜಿನಿಯರ್ ಅಸೋಸಿಯೇಷನ್ 1000 ಕಿಟ್ ಒದಗಿಸಿದ್ದಾರೆ ಹಾಗೂ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು 200 ಕಿಟ್ ಒದಗಿಸಿದ್ದಾರೆ. ಮುಂದಿನ ಹಂತದಲ್ಲಿ 1 ಸಾವಿರ ಕಿಟ್ ಗಳನ್ನು ಆಂಟೋನಿ ವೆಸ್ಟ್ ಕಾರ್ಮಿಕರಿಗೆ ವಿತರಿಸುವ ಯೋಜನೆಯ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಲಾಕ್ ಡೌನ್ ಪರಿಸ್ಥಿತಿಯಲ್ಲಿ ನಗರ ಪೂರ್ಣ ಪ್ರಮಾಣದಲ್ಲಿ ಸ್ಥಬ್ದವಾಗಿದೆ. ಇಂತಹ ಸಂಧರ್ಭದಲ್ಲಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಅವಶ್ಯಕತೆ ಇರುವವರಿಗೆ ಬೇಕಾದ ಆಹಾರ ಪದಾರ್ಥಗಳನ್ನು ಒದಗಿಸುವ ಕಾರ್ಯ ಸರಕಾರವೂ ಮಾಡುತ್ತಿದೆ. ಆದರೆ ಇಡೀ ರಾಜ್ಯದ ಪರಿಸ್ಥಿತಿಯೂ ಒಂದೇ ರೀತಿ ಇದೆ. ಹಾಗಾಗಿ ಸ್ಥಳೀಯ ದಾನಿಗಳ ಮೂಲಕ ಆಹಾರ ಒದಗಿಸುವ ಕಾರ್ಯಕ್ಕೆ ಕೈ ಜೋಡಿಸಬೇಕಿದೆ ಎಂದರು.

ಮಹಾ ಪೌರರಾದ ದಿವಾಕರ್ ಪಾಂಡೇಶ್ವರ, ಉಪ ಮಹಾಪೌರರಾದ ವೇದವತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಕಿರಣ್ ಕುಮಾರ್, ಜಗದೀಶ್ ಶೆಟ್ಟಿ, ಪಾಲಿಕೆಯ ಆಯುಕ್ತರಾದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉಪ ಆಯುಕ್ತರಾದ ಸಂತೋಷ್ ಕುಮಾರ್,ಎಂಜಿನಿಯರಿಂಗ್ ಅಸೋಸಿಯೇಷನ್ ಇದರ ಅದ್ಯಕ್ಷರು – ಪದಾಧಿಕಾರಿಗಳು, ಆದಾಯ ತೆರಿಗೆ ಇಲಾಖೆಯ ಪ್ರಮುಖರಾದ ಸುಧೀಂದ್ರ ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ವಿಪಕ್ಷ ನಾಯಕರಾದ ರವೂಫ್ ಮುಂತಾದವರು ಉಪಸ್ಥಿತರಿದ್ದರು.

Comments are closed.