ಕರಾವಳಿ

ಮಂಗಳೂರಿನಲ್ಲಿ ಕೊರೋನಗೆ ಮೊದಲ ಬಲಿ : ವೆನ್ಲಾಕ್‌ ಆಸ್ಪ್ರತ್ರೆಗೆ ದಾಖಲಾಗಿದ್ದ ಬಂಟ್ವಾಳ ಮೂಲದ ಮಹಿಳೆ ಮೃತ್ಯು

Pinterest LinkedIn Tumblr

ಮಂಗಳೂರು, ಎಪ್ರಿಲ್.19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಕು ಮೊದಲ ಬಲಿ ಪಡೆದಿದ್ದು, ಉಸಿರಾಟದ ತೊಂದರೆಯಿಂದ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 45 ವರ್ಷ ಪ್ರಾಯದ ಮಹಿಳೆಯೊಬ್ಬರು ರವಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 45 ವರ್ಷದ ಮಹಿಳೆ‌ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಅಲ್ಲಿಂದ ವೆನ್ಲಾಕ್‌ನಲ್ಲಿರುವ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಗಂಟಲ ದ್ರವದ ಮಾದರಿಯನ್ನು ಶನಿವಾರವೇ ಪರೀಕ್ಷೆಗೆ ಕಳುಹಿಸಲಾಗಿದ್ದು ಭಾನುವಾರ ಬೆಳಿಗ್ಗೆ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ

ಈ ಮಹಿಳೆಗೆ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಗೆ ದಾಖಲಿಸಲಾಗಿತ್ತು. ಅವರ ಗಂಟಲಿನ ದ್ರವವನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿದ್ದು, ಈ ಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನ ವೈರಸ್ ದ.ಕ. ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಂತಾಗಿದೆ.

ವೈದ್ಯಕೀಯ ಶಿಷ್ಠಾಚಾರದಂತೆ ಶವ ಸಂಸ್ಕಾರ:

ರೋಗಿಗೆ ಕೋವಿಡ್ -19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರ ಶವ ಸಂಸ್ಕಾರವನ್ನು ವೈದ್ಯಕೀಯ ಶಿಷ್ಠಾಚಾರದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡದ ನೇತ್ರತ್ವದಲ್ಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ

13ರಲ್ಲಿ 12 ಮಂದಿ ಗುಣಮುಖ : ಈಗಾಗಲೆ 13 ಕೊರೋನ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.