ಕರಾವಳಿ

ಕೊರೋನಾ ವಾರಿಯರ್ಸ್ ಗಳ ಮೇಲೆ ಕೈ ಮಾಡಿದರೆ ಗೂಂಡಾ ಕೇಸ್ : ಸಚಿವ ಕೋಟ

Pinterest LinkedIn Tumblr

ಮಂಗಳೂರು : ಕೊರೋನಾ ವಾರಿಯರ್ಸ್ ಗಳ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರಿಗೆ ಲಾಠಿ, ರಿವಾಲ್ವರ್ ಕೊಟ್ಟಿರುವುದು, ಪ್ರದರ್ಶನಕ್ಕೆ ಅಲ್ಲ, ಜೀವ‌ರಕ್ಷಣೆಗಾಗಿ. ಆದರೆ ಅವರ ಮೇಲೆಯೇ ಹಲ್ಲೆ ನಡೆಯುವುದನ್ನು ಸಹಿಸಲಾಗದು. ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಅನಿವಾರ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ನೀಡಿರುವ ದಿನಸಿ ಸಾಮಾಗ್ರಿಗಳನ್ನು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಸ್ತಾಂತರ ಮಾಡಿ ಅವರು ಮಾತನಾಡಿದರು.

ಕೊರೋನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಹಲ್ಲೆ ಮಾಡಿದವರನ್ನು ಗೂಂಡಾ ಕೇಸ್ ಹಾಕುವ ಮೂಲಕ ಜೈಲಿಗಟ್ಟಲಾಗುವುದು ಎಂದು ಸಚಿವರು ತಿಳಿಸಿದರು.

Comments are closed.