ಮಂಗಳೂರು : ಜಿಲ್ಲೆಯಾದ್ಯಂತ ಇರುವ ಎಲ್ಲಾ ವಸತಿ ಸಮುಚ್ಛಯಗಳ ಕೊಳಚೆ ನೀರು ತೆರದ ಚರಂಡಿ ಯಲ್ಲೇ ಹರಿದು ಸ್ಥಳಿಯರ ಬಾವಿ ಹಾಳಾಗಿದ್ದು, ರೋಗಗಳು ಬರುವ ಅಪಾಯಇದೆ. ಈ ಹಿನ್ನೆಲೆಯಲ್ಲಿ ತಕ್ಷಣ ಸಮೀಕ್ಷೆ ನಡೆಸಿ, ಜಿಲ್ಲೆಯಾದ್ಯಂತಇರುವ ವಸತಿ ಸಮುಚ್ಛಯಗಳ ಮೂಲಭೂತ ಸಮೀಕ್ಷೆಗಳ ಹೇಗೆ ಇದೆಎಂಬುದರ ಬಗ್ಗೆ ವರದಿ ನೀಡಲು ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಅವರು ನಿರ್ದೇಶಿಸಿದರು.
ಅವರು ಜಿಲ್ಲಾ ಪಂಚಾಯತ್ನಲ್ಲಿ ವೀಡಿಯೋಕಾನ್ಫೆರೆನ್ಸ್ ಮೂಲಕ ಜಿಲ್ಲೆಯತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಮುಂಬರುವ ಮಳೆಗಾಳದಲ್ಲಿ ಬರಬಹುದಾದ, ಡೆಂಗ್ಯು, ಮಲೇರಿಯಾ, ಇಲಿ ಜ್ವರ ಮತ್ತಿತರ ಕಾಯಿಲೆಗಳ ಬಗ್ಗೆ ಜಾಗೃತರಾಗಬೇಕು ಎಂದು ಈ ಸಂದರ್ಭದಲ್ಲಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ , ಜಿ.ಪಂ. ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು.

Comments are closed.