ಕರಾವಳಿ

ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ : ಸೋಂಕಿತರ ಸಂಖ್ಯೆ 18ಕ್ಕೇರಿಕೆ

Pinterest LinkedIn Tumblr

ಮಂಗಳೂರು, ಎಪ್ರಿಲ್.25: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ದ.ಕ ಜಿಲ್ಲೆಯ ಬಂಟ್ವಾಳದ ಮತ್ತೊಬ್ಬ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ 33 ವರ್ಷದ ಮಹಿಳೆಯೊಬ್ಬರಲ್ಲಿ ಸೋಂಕು ದೃಢಪಟ್ಟಿ ರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿದ ಬುಲೆಟ್‌ನಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18ಕ್ಕೇರಿದೆ.

ಕೊರೋನ ಸೋಂಕಿನಿಂದ ಎಪ್ರಿಲ್ 19 ಮತ್ತು 23ರಂದು ಮೃತಪಟ್ಟ ಬಂಟ್ವಾಳ ಪೇಟೆಯ ಸೊಸೆ ಮತ್ತು ಅತ್ತೆಯ ನೆರೆಮನೆಯ 67 ವರ್ಷ ಪ್ರಾಯದ ಮಹಿಳೆಗೆ ಎಪ್ರಿಲ್ 21ರಂದು ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇಂದು ಅವರ 33 ವರ್ಷದ ಮಗಳಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.

ಸದ್ಯ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ವೃದ್ದೆಯ ಮಗಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಸೋಂಕಿತ ಮಹಿಳೆಯನ್ನು ವೆನ್ಲಾಕ್ ನ ಕೋವೀಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈಕೆ ಕೊರೋನ ಸೋಂಕಿತರಾಗಿ ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಂಟ್ವಾಳ ಪೇಟೆಯ 67 ವರ್ಷ ಪ್ರಾಯದ ಮಹಿಳೆಯ ಪುತ್ರಿಯಾಗಿದ್ದಾರೆ. ತಾಯಿಯ ಸಂಪರ್ಕದಿಂದ ಸೋಂಕು ತಗಲಿರುವುದಾಗಿ ತಿಳಿಸಲಾಗಿದೆ.

ಇದೀಗ ಬಂಟ್ವಾಳದ ಕಸಬಾ ಬಳಿಯ ನಾಲ್ಕು ಮಂದಿಗೆ ಪಾಸಿಟಿವ್ ಆಗಿದ್ದು, ನಾಲ್ವರೂ ಮಹಿಳೆಯರಾಗಿದ್ದಾರೆ. ಈ ಪೈಕಿ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇಂದು ಪಾಸಿಟಿವ್ ಆದ ಮಹಿಳೆಗೆ ಎ.19ರಂದೇ ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.ಸದ್ಯ ಒಂದೇ ಕುಟುಂಬದ ಇಬ್ಬರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 18 ಮಂದಿಗೆ ಸೋಂಕು ಪಾಸಿಟಿವ್ ಆಗಿದ್ದು, ಈ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2 ಮಂದಿ ಮೃತಪಟ್ಟಿದ್ದು, 4 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Comments are closed.