ಕರಾವಳಿ

ಮಂಗಳೂರು: ವಿವಿ ಯುವ ರೆಡ್ ಕ್ರಾಸ್‍ನಿಂದ ಕೊವಿಡ್-19 ಬಗ್ಗೆ ಜಾಗೃತಿ ಅಭಿಯಾನ

Pinterest LinkedIn Tumblr

ಮಂಗಳೂರು ಮೇ 04 : ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‍ಕ್ರಾಸ್ ಘಟಕವು ಮಾರಕ ಕೊವಿಡ್-19 ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದೆ.

ಕೊರೋನಾ ವೈರಾಣು ಸೋಂಕು ತಂದೊಡ್ಡುವ ಅಪಾಯಗಳ ಕುರಿತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ವಿವಿಧ ರೀತಿಯಲ್ಲಿ ತಿಳುವಳಿಕೆ ನೀಡಲಾಗುತ್ತಿದೆ. ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ತಿಳಿಸುವ ಪೆÇೀಸ್ಟರ್‍ಗಳನ್ನು ಬಳಸಿಕೊಂಡು ವಾಸ್ತವವನ್ನು ಜನತೆಗೆ ಮನವರಿಕೆ ಮಾಡಿಕೊಡಲಾಗುತ್ತಿದೆ.

ಸಾಮಾಜಿಕ ಅಂತರ ಕಾಯ್ದು ಕೊಳ್ಳುವಿಕೆ ಹಾಗೂ ವೈಯಕ್ತಿಕ ಸ್ವಚ್ಛತೆಯ ಮಹತ್ವವನ್ನು ತಿಳಿಸಿಕೊಡಲಾ ಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವಿಕೆ, ಲಾಕ್ಡೌನ್ ಮಾರ್ಗಸೂಚಿ ಉಲ್ಲಂಘನೆ ಮೊದಲಾದ ಕುರಿತು ಸಂಬಂಧಪಟ್ಟವರ ಗಮನ ತರುವುದರೊಂದಿಗೆ ಹಳ್ಳಿಗಳನ್ನು ತಲುಪಲಾಗುತ್ತಿದೆ.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿಶ್ವವಿದ್ಯಾನಿಲಯದ ಯುವ ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳು ಮತ್ತು ಸ್ವಯಂಸೇವಕರ ಈ ಕೆಲಸಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.