ಮಂಗಳೂರು, ಮೇ.03; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಗ್ಗೆ 7 ರಿಂದ 7 ರ ತನಕ ವರೆಗೆ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಕೆಲವೊಂದು ನಿರ್ಧಿಷ್ಟ ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಾಳೆ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅನುಮತಿ,,ಸ್ಥಳೀಯ ಅಂಗಡಿಗಳು,ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್ ಗಳನ್ನು ತೆರೆಯಲು ಅನುಮತಿ.,,ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33% ಸಿಬ್ಬಂದಿ ಬಳಸಿ ಕೆಲಸಕ್ಕೆ ಅನುಮತಿ. ಅಗತ್ಯ ಸೇವೆಗಳಿಗೆ ಇ-ಕಾಮರ್ಸ್ ಸಂಸ್ಥೆಗಳಿಗೆ ಅವಕಾಶ ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶ, ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ, ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ, ಸ್ಥಳದಲ್ಲಿದ್ದ ಕಾರ್ಮಿಕರ ಬಳಕೆಗೆ ಸೂಚನೆ, ಹೊರಗಿನಿಂದ ಕಾರ್ಮಿಕರು ಬರುವಂತಿಲ್ಲ, ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಶಾಪ್ ತೆರೆಯಲಷ್ಟೇ ಅನುಮತಿ ನೀಡಲಾಗಿದೆ.
ಏನಿರೋದಿಲ್ಲ?
ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ಬಂದ್, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳು ನಿಷೇಧ ರಾತ್ರಿ 7 ರಿಂದ ಬೆ.7ರ ವರೆಗೆ ಎಲ್ಲಾ ರೀತಿಯ ಸಂಚಾರ,ಸೇವೆ ಬಂದ್ ಮಾಡಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

Comments are closed.