ಕರಾವಳಿ

ಮಂಗಳೂರಿನಲ್ಲಿ ಮತ್ತೊಂದು ಕರೋನಾ ಪಾಸಿಟಿವ್ ದೃಢ :ಬೋಳೂರಿನ ವ್ಯಕ್ತಿಯಲ್ಲಿ ಸೋಂಕು ಪತ್ತೆ

Pinterest LinkedIn Tumblr

ಮಂಗಳೂರು, ಮೇ 05 : ಮಂಗಳೂರಿನಲ್ಲಿ ಇಂದು ಮತ್ತೊಂದು ಕರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ದ.ಕ.ಜಿಲ್ಲೆಯಲ್ಲಿ ಸೋಕು ದೃಢಪಟ್ಟವರ ಸಂಖ್ಯೆ ೨೫ಕ್ಕೇರಿದೆ. ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

ರೋಗಿ ಸಂಖ್ಯೆ 536 ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ದ.ಕ. ಜಿಲ್ಲೆಯ ಮಂಗಳೂರಿನ ಬೋಳೂರಿನ 51 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಬೋಳೂರಿನ 58 ವರ್ಷದ ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕಳೆದ 15 ದಿನಗಳ ಹಿಂದೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಇಲ್ಲಿ ಪಿ-501 ಸಂಪರ್ಕಕ್ಕೆ ಬಂದಿದ್ದ ಇವರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಇದಾದ ಬಳಿಕ ಮೇ 1 ರಂದು ಮಹಿಳೆಯ 62 ವರ್ಷದ ಪತಿಯಲ್ಲೂ ಸೋಂಕು ದೃಢಪಟ್ಟಿತ್ತು.

ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಬೋಳಾರಿನ ನಿವಾಸಿ, 51 ವರ್ಷದ ವ್ಯಕ್ತಿಗೂ ಇದೀಗ ಸೋಂಕು ಬಾಧಿಸಿದ್ದು, ಒಂದೇ ಪ್ರದೇಶದಲ್ಲಿ ಮೂವರು ಸೋಂಕು ಪೀಡಿತರಿದ್ದಾರೆ.ಈ ಮೂವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ

ಇದೀಗ ಮಂಗಳೂರಿನ ಬೋಳೂರಿನ ಓರ್ವ ವ್ಯಕ್ತಿ ಮತ್ತು ಭಟ್ಕಳದ ಯುವತಿ ಸೇರಿದಂತೆ ರಾಜ್ಯದಲ್ಲಿ ಇಂದು 8 ಮಂದಿಯಲ್ಲಿ ಕೊರೋನ ಸೋಂಕು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ. ಬೆಂಗಳೂರು ನಗರದ ಮೂರು ಮಂದಿ, ಬಾಗಲಕೋಟೆಯ ಇಬ್ಬರು, ಬಳ್ಳಾರಿ, ದ.ಕ. ಜಿಲ್ಲೆ ಮತ್ತು ಭಟ್ಕಳದ ಓರ್ವರಲ್ಲಿ ಕೊರೋನ ಸೋಂಕು ದೃಢವಾಗಿದೆ ಎಂದು ಪ್ರಕಟನೆ ತಿಳಿಸಿದೆ.

Comments are closed.