ಕರಾವಳಿ

ಕೋವಿಡ್ ವಾರಿಯರ್ಸ್ ದೇವರಿಗೆ ಸಮ : ವಿಶ್ವ ರೆಡ್‍ಕ್ರಾಸ್ ದಿನಾಚರಣೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ವಿಶ್ವ ರೆಡ್‍ಕ್ರಾಸ್ ದಿನಾಚರಣೆ ಅಂಗವಾಗಿ ಮೇ 8ರಂದು ಶುಕ್ರವಾರ ಆಯೋಜಿಸಲಾದ ಆಶಾ ಕಾರ್ಯಕರ್ತರು ಹಾಗೂ ದಾದಿಯರಿಗೆ ಮಾಸ್ಕ್, ಸ್ಯಾನಿಟೈಸರ್, ಸಾಬೂನುಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ವಿತರಿಸಿದರು.

ಮಂಗಳೂರು : ಜಗತ್ತೇ ಸಂಕಷ್ಟ ಪ;ರಿಸ್ಥಿತಿಯಲ್ಲಿದ್ದು, ಕೋವಿಡ್-19 ವಿರುದ್ಧ ನೇರವಾಗಿ ಹೋರಾಡುತ್ತಿರುವ ಕೋವಿಡ್ ವಾರಿಯರ್ಸ್‍ಗಳಾಗಿರುವ ವೈದ್ಯರು, ದಾದಿಯರು, ಪೊಲೀಸರು, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸೇವಾಕರ್ತರು ದೇವರಿಗೆ ಸಮನಾಗಿದ್ದಾರೆ. ವಿಶ್ವ ರೆಡ್‍ಕ್ರಾಸ್ ದಿನಾಚರಣೆಯನ್ನು ಕೋವಿಡ್ ವಾರಿಯರ್ಸ್‍ಗೆ ವಿಶ್ವದಾದ್ಯಂತ ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸಂಸದರ ಕಚೇರಿಯಲ್ಲಿ ವಿಶ್ವ ರೆಡ್‍ಕ್ರಾಸ್ ದಿನಾಚರಣೆ ಅಂಗವಾಗಿ ಮೇ 8ರಂದು ಶುಕ್ರವಾರ ಆಯೋಜಿಸಲಾದ ಆಶಾ ಕಾರ್ಯಕರ್ತರು ಹಾಗೂ ದಾದಿಯರಿಗೆ ಮಾಸ್ಕ್, ಸ್ಯಾನಿಟೈಸರ್, ಸಾಬೂನು ವಿತರಣೆ ಹಾಗೂ ಕೋವಿಡ್ ವಾರಿಯರ್ಸ್‍ಗೆ ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಮ್ಮ ಜೀವದ ಹಂಗು ತೊರೆದು ಕೊರೊನಾ ರೋಗಿಗಳು ಅಥವಾ ಶಂಕಿತರೊಂದಿಗೆ ನೇರವಾಗಿ ಕೆಲಸ ಮಾಡುವ ಕೋವಿಡ್ ವಾರಿಯರ್ಸ್ ಕಾರ್ಯಕ್ಕೆ ಎಷ್ಟು ಗೌರವ ಸಲ್ಲಿಸಿದರೂ ಸಾಲದು. ಇಂತಹ ಸಂದರ್ಭ ರೆಡ್‍ಕ್ರಾಸ್ ಅವರ ಸುರಕ್ಷತೆಗಾಗಿ ಅಗತ್ಯ ವಸ್ತುಗಳನ್ನು ನೀಡಿ ಅರ್ಥಪೂರ್ಣವಾಗಿ ಮಾನವೀಯ ಸೇವೆಯನ್ನು ಮಾಡಿದೆ ಎಂದರು.

ಈ ಸಂದರ್ಭ ಭಾರತೀಯ ರೆಡ್‍ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಚೇರ್‍ಮೆನ್ ಸಿಎ ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ, ಸಾರ್ವಜನಿಕ ಸಂಪರ್ಕ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ಬಿ. ರವೀಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಭಾರ ಶರ್ಮಾ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮುಖಂಡರಾದ ಸತೀಶ್ ಕುಂಪಲ, ಡಿಎಚ್ಒ ಡಾ. ಬಾಯರಿ, ಯೂತ್ ರೆಡ್‍ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ಸಂಚಾಲಕ ಪ್ರವೀಣ್ ಮುಂತಾದವರು ಉಪಸ್ಥಿತರಿದ್ದರು.

Comments are closed.