ಕರಾವಳಿ

ದ.ಕ.ದಿಂದ ಹೊರ ರಾಜ್ಯಗಳಿಗೆ ಹೋಗಲು ಸುಮಾರು 20,000 ಮಂದಿ ನೋಂದಣಿ: ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು : ಸೇವಾ ಸಿಂಧೂ ವ್ಯವಸ್ಥೆಯಲ್ಲಿ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಹೋಗಲು ಸುಮಾರು 20,000 ಮಂದಿ ನೋಂದಣಿ ಮಾಡಿದ್ದಾರೆ ಇದರಲ್ಲಿ 5000 ಮಂದಿ ಜಾರ್ಖಂಡ್, 3000 ಉತ್ತರ ಪ್ರದೇಶ, 4000 ಮಂದಿ ಬಿಹಾರ ರಾಜ್ಯಕ್ಕೆ ಸೇರಿದವರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಹೊರರಾಜ್ಯದ ಕಾರ್ಮಿಕರು ಸಂಚರಿಸಲು ರೈಲ್ವೆ ವ್ಯವಸ್ಥೆ ಮಾಡುವ ಸಂಬಂಧ ಈಗಾಗಲೇ ಮುಖ್ಯ ಕಾರ್ಯದರ್ಶಿಯೊಂದಿಗೆ ಹಾಗೂ ಮುಖ್ಯಮಂತ್ರಿ ಗಳೊಂದಿಗೆ ಮಾತನಾಡಿರುವುದಾಗಿ ಹೇಳಿದರು.

ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ವಲಸೆ ಕಾರ್ಮಿಕರನ್ನು ಕಳುಹಿಸಲು ಸುಮಾರು 20 ರೈಲುಗಳ ಅಗತ್ಯವಿದ್ದು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ. ಆದಾಗ್ಯೂ ಸಲ್ಲದ ಅಪಪ್ರಚಾರ ಮಾಡಿ ಕಾರ್ಮಿಕರ ಹೆಸರಿನಲ್ಲಿ ಜಿಲ್ಲಾಡಳಿತದ ಮೇಲೆ ಆಪಾದನೆ ಮಾಡುತ್ತಿರುವವರ ಮುಖಂಡರ ಹೇಳಿಕೆ ನೋವು ತಂದಿದೆ ಎಂದು ಅವರು ಹೇಳಿದರು.

Comments are closed.