ಕರಾವಳಿ

ಕಾರ್ಕಳಕ್ಕೂ ತಟ್ಟಿದ ಫಸ್ಟ್ ನ್ಯೂರೋ ಎಫೆಕ್ಟ್ : ಜಿಲ್ಲೆಯಲ್ಲಿ ನಿನ್ನೆ124 ವರದಿ ನೆಗೆಟಿವ್ -ಇಂದು 2 ಪಾಸಿಟಿವ್

Pinterest LinkedIn Tumblr

ದ.ಕ.ಜಿಲ್ಲೆಯಲ್ಲಿ ಒಟ್ಟು ಸೋಕು ಪೀಡಿತರ ಸಂಖ್ಯೆ 33ಕ್ಕೇರಿಕೆ

ಮಂಗಳೂರು, ಮೇ 12: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿದಂತೆ ಶನಿವಾರ ತಾರೀಕು 9ರಂದು ದ.ಕ.ಜಿಲ್ಲೆಯಲ್ಲಿ ಮೂರು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಬಳಿಕ ಬಾನುವಾರ ಹಾಗೂ ಸೋಮವಾರ ಯಾವೂದೇ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ.

ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಸೋಮವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 124 ವರದಿ ನೆಗೆಟಿವ್ ಬಂದಿದೆ. ಕಳೆದ ಎರಡು ದಿನಗಳಿಂದ ಪಾಸಿಟಿವ್ ಪ್ರಕರಣ ಕಂಡು ಬರದ ಹಿನ್ನೆಲೆಯಲ್ಲಿ ನಿರಾಳವಾಗಿದ್ದ ಮಂಗಳೂರಿನಲ್ಲಿ ಇಂದು ( ಮಂಗಳವಾರ) ಮತ್ತೆ ಎರಡು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

ದ.ಕ.ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಕು ಪೀಡಿತರ ಒಟ್ಟು ಸಂಖ್ಯೆ 31ಕ್ಕೇರಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೂವರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಬಂಟ್ವಾಳದಲ್ಲಿ ಮೃತಪಟ್ಟ 69 ವರ್ಷದ P578 ವೃದ್ದನ ಸಂಪರ್ಕದಿಂದಾಗಿ ಬಂಟ್ವಾಳದ ಕಂಟೈನ್ಮೆಂಟ್ ಝೋನ್ ಕಸಬಾ ಗ್ರಾಮದ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ತಗುಲಿತ್ತು. ವೃದ್ದನಿಗೆ ಬಂಟ್ವಾಳದಲ್ಲಿ ಮೃತಪಟ್ಟ P-390 ಮಹಿಳೆಯಿಂದ ಸೋಂಕು ತಗುಲಿದ್ದು ವೃದ್ದನಿಗೆ ಪಾಸಿಟಿವ್ ಹಿನ್ನೆಲೆ ಆ ಮನೆಯ 8 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಆದರೆ ಬಾನುವಾರ ಹಾಗೂ ಸೋಮವಾರ ಯಾವೂದೇ ಪಾಸಿಟಿವ್ ಪ್ರಕರಣ ಕಂಡು ಬಂದಿರಲಿಲ್ಲ. ಇದರಿಂದ ಜಿಲ್ಲೆಯ ಜನತೆ ನಿರಾಳವಾಗಿದ್ದರು. ಆದರೆ ಇದೀಗ ಇಂದು ಜಿಲ್ಲೆಯಲ್ಲಿ ಮತ್ತೆ ಎರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯ ಜನತೆಯಲ್ಲಿ ಆತಂಕ ಹೆಚ್ಚಾಗಿದೆ.

ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಕು ಪೀಡಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಧ್ಯಾಹ್ನದ ಬುಲೆಟಿನ್‌ನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

52 ವರ್ಷದ ಮಹಿಳೆ ಮತ್ತು 26 ವರ್ಷದ ಯುವಕನಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಇಬ್ಬರು ಮಂಗಳೂರಿನ ಪಡೀಲ್ ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ರೋಗಿ ಸಂಖ್ಯೆ P-507 ರ ಸಂಪರ್ಕದಿಂದ ಇಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಂಗಳೂರಿನ ಶಕ್ತಿನಗರದ 80 ವರ್ಷದ ವೃದ್ಧೆ P-507 ಸಂಪರ್ಕದಿಂದ ಸೋಕು ತಗುಲಿರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ 40,574 ಮಂದಿಯ ಸ್ಕ್ರೀನಿಂಗ್ :

ದ.ಕ.ಜಿಲ್ಲೆಯಲ್ಲಿ ಸೋಮವಾರ 48 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದ್ದು, ಇದರೊಂದಿಗೆ ಈವರೆಗೆ 40,574 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಸಂಚಾರ ಕ್ಲಿನಿಕ್‌ನಲ್ಲಿ 351 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಅಲ್ಲದೆ 68 ಮಂದಿಯ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜ್ವರ ಕ್ಲಿನಿಕ್‌ಗಳಲ್ಲಿ ಈವರೆಗೆ 2949 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ.

ಎನ್‌ಐಟಿಕೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 32 ಮಂದಿಯ ಪೈಕಿ 12 ಮತ್ತು ಇಎಸ್‌ಐ ಆಸ್ಪತ್ರೆಯಲ್ಲಿದ್ದ 40 ಮಂದಿ ಪೈಕಿ 16 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಉಳಿದಂತೆ 13 ಮಂದಿಯ ಮೇಲೆ ವಿಶೇಷ ನಿಗಾ ಇಡಲಾಗಿದೆ.

Comments are closed.