ಕರಾವಳಿ

ಭೂಗತ ಜಗತ್ತಿನ ಕಿಂಗ್ “ಅಂಡರ್‌ವರ್ಲ್ಡ್ ಡಾನ್” ಮುತ್ತಪ್ಪ ರೈ ವಿಧಿವಶ

Pinterest LinkedIn Tumblr

ಬೆಂಗಳೂರು: ಕ್ಯಾನ್ಸರ್​ನಿಂದ ಬಳಲುತ್ತಿದ್ದ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅರೋಗ್ಯ ಸ್ಥಿತಿ ತೀರಾ ಹದಗೆಟ್ಟ ಪರಿಣಾಮ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದೆರಡು ವರ್ಷದಿಂದ ಕ್ಯಾನ್ಸರ್​ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿತ್ತು. ತೀರಾ ಅರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಭೂಗತ ಲೋಕವನ್ನು ತೊರೆದು ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕನ್ನಡಪರ ಹೋರಾಟ, ಸಮಾಜ ಸೇವೆಯಲ್ಲಿ ಮುತ್ತಪ್ಪ ರೈ ತೊಡಗಿಸಿಕೊಂಡಿದ್ದರು. 2013ರಲ್ಲಿ ರೈ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. 2018ರಲ್ಲಿ ಇವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಸುದ್ದಿಗೋಷ್ಠಿ ಕರೆದು ಕ್ಯಾನ್ಸರ್ ಬಗ್ಗೆ ಹೇಳಿಕೊಂಡಿದ್ದರು.

ಕೆಲದಿನಗಳ ಹಿಂದಷ್ಟೇ ಇವರ ಜೊತೆ ಹಲವು ವರ್ಷಗಳಿಂದ ಒಡನಾಟ ಇಟ್ಟುಕೊಂಡಿದ್ದ, ಭೂಗತ ಲೋಕದೊಂದಿಗೆ ನಂಟು ಇದೆ ಎನ್ನಲಾಗಿದ್ದ ಇವರ ಆಪ್ತ ರಾಕೇಶ್ ಮಲ್ಲಿ ರೈ ವಿರುದ್ಧ ಸಿಸಿಬಿಗೆ ದೂರು ನೀಡಿದ್ದು ತನ್ನ ಕೊಲೆಗೆ ಸಂಚು ನಡೆದಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

ಈ ಬಗ್ಗೆ ಪೊಲೀಸರು ವ್ಯಾಪಕ ತನಿಖೆ ಕೈಗೊಂಡಿರುವ ನಡುವೆಯೆ ದುಬೈ ಸೇರಿದಂತೆ ಇಡೀ ಭೂಗತ ಜಗತನ್ನು ಆಲ್ಲಾಡಿಸಿದ “ಅಂಡರ್‌ವರ್ಲ್ಡ್ ಡಾನ್” ಮುತ್ತಪ್ಪ ರೈ ಇನ್ನಿಲ್ಲ ಎಂಬ ಮಾಹಿತಿ ಲಭಿಸಿದೆ.

Comments are closed.