ಕರಾವಳಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರೋಗ್ಯ ಕಾರ್ಯಕರ್ತೆಯರಿಗೆ ರೂ 50 ಲಕ್ಷ ಮೌಲ್ಯದ ಕಿಟ್ ವಿತರಣೆ

Pinterest LinkedIn Tumblr

ಮಂಗಳೂರು : ಕೊರೋನಾ ವೈರಸ್ ಭೀತಿಯಲ್ಲೂ ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 50 ಲಕ್ಷ ಮೌಲ್ಯದ ಒಂದು ಸಾವಿರ ಆಹಾರ ಕಿಟ್‍ಗಳನ್ನು ವಿತರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ಕಿಟ್ ವಿತರಣೆ ನಡೆಯಿತು. ಕಾರ್ಯಕ್ರಮ ದಲ್ಲಿ ಮೇಯರ್ ದಿವಾಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಉಮರಬ್ಬ, ಸತೀಶ್ ಶೆಟ್ಟಿ, ವಸಂತ್, ಮಾಜಿ ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಆಶಾ ಮೇಲ್ವಿಚಾರಕಿ ಕುಮುದಾ ಮತ್ತಿತರು ಉಪಸ್ಥಿತರಿದ್ದರು.

ಎಂ.ಸಿ.ಎಫ್. ವತಿಯಿಂದ ಆಹಾರ ಕಿಟ್‍ ವಿತರಣೆ :

ಅದೇ ರೀತಿಯಲ್ಲಿ ಎಂ.ಸಿ.ಎಫ್. ವತಿಯಿಂದ ಲಾಕ್‍ಡೌನ್‍ಯಿಂದ ತೊಂದರೆ ಒಳಗಾದ ದ.ಕ. ಜಿಲ್ಲಾ ಛಾಯಾಗ್ರಾಹಕರಿಗೆ ಆಹಾರ ಕಿಟ್‍ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್ ಇದ್ದರು.

Comments are closed.