ಕರಾವಳಿ

ದ.ಕ.ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪತ್ತೆ : ಬಂಟ್ವಾಳ ಮೂಲದ ಯುವಕ ಹಾಗೂ ಯೆಯ್ಯಾಡಿಯ ಮಹಿಳೆಯಲ್ಲಿ ಸೋಂಕು ದೃಢ

Pinterest LinkedIn Tumblr

ಮಂಗಳೂರು, ಮೇ.18: ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ರಾಜ್ಯ ಆರೋಗ್ಯ ಇಲಾಖೆ ಇಂದು ಸಂಜೆ ಹೊರಡಿಸಿದ ಬುಲೆಟಿನ್ ನಲ್ಲಿ ಬಂಟ್ವಾಳ ಮೂಲದ ಯುವಕ ಹಾಗೂ ಯೆಯ್ಯಾಡಿಯ ಮಹಿಳೆಯಲ್ಲಿ ಸೋಂಕು ದೃಢಪಟ್ಟಿರುವುದನ್ನು ಖಚಿತ ಪಡಿಸಿದೆ.

ಮುಂಬೈನಿಂದ ಮರಳಿರುವ 30 ವರ್ಷದ ಯುವಕ ಹಾಗೂ ತೀವ್ರ ಉಸಿರಾಟ ಸಮಸ್ಯೆ ( SARI)ಯಿಂದ ಬಳಲುತ್ತಿರುವ 55 ವರ್ಷದ ಮಹಿಳೆಯಲ್ಲಿ ಸೋಂಕು ಕಂಡು ಬಂದಿದೆ.

ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಯುವಕ ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಬಳಿಕ ಕ್ವಾರೆಂಟೈನ್ ನಲ್ಲಿದ್ದರು. ಮಂಗಳೂರಿನ ಯೆಯ್ಯಾಡಿ ನಿವಾಸಿ ಮಹಿಳೆ ಜ್ವರದಿಂದ ಕೋವಿಡ್ ಆಸ್ಪತ್ರೆಗೆ ಬಂದಾಗ ಸೋಂಕು ಪತ್ತೆ‌ಯಾಗಿದೆ.

ಇವರು ಇಬ್ಬರನ್ನು ಕೂಡಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯ ಸೋಂಕಿನ ಮೂಲ ಪತ್ತೆಹಚ್ಚಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಮುಖ್ಯಂಶಗಳು :

ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್

30 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್

ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ 30 ವರ್ಷದ ಯುವಕ

ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ ವ್ಯಕ್ತಿ

55 ವರ್ಷದ ಮಹಿಳೆಗೆ SARI ಪ್ರಕರಣದಲ್ಲಿ ಕೊರೋನಾ ಪಾಸಿಟಿವ್ ಪತ್ತೆ

ಮಂಗಳೂರಿನ ಯೆಯ್ಯಾಡಿ ನಿವಾಸಿ ಮಹಿಳೆಗೆ ಕೊರೋನಾ ಪಾಸಿಟಿವ್

ಜ್ವರದಿಂದ ಕೋವಿಡ್ ಆಸ್ಪತ್ರೆಗೆ ಬಂದಾಗ ಸೋಂಕು ಪತ್ತೆ‌

ಮಹಿಳೆಗೆ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ.

Comments are closed.