ಕರಾವಳಿ

ಮಳೆ ಹಾನಿ ಕಾರ್ಯಾಚರಣೆ : ಮಂಗಳೂರಿನಲ್ಲಿ ಪ್ರತೀ 6 ವಾರ್ಡುಗಳಿಗೆ ಒಂದು ತಂಡ ರಚನೆ

Pinterest LinkedIn Tumblr

 

ಮಂಗಳೂರು : ಕಳೆದ ವರ್ಷದಲ್ಲಿ ಅಪಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು ರಸ್ತೆ, ಸೇತುವೆ ಸೇರಿದಂತೆ ಅನೇಕ ರೀತಿ ಮೂಲ ಸೌಕರ್ಯಗಳಿಗೆ ಹಾನಿ ಉಂಟಾಗಿತ್ತು. ಪ್ರಸುತ್ತ ಸಾಲಿನಲ್ಲಿ ಕಳೆದ ಸಾಲಿಗಿಂತ ಹೆಚ್ಚುವರಿ ಮಳೆಯಾದರೆ ಸಮರ್ಥವಾಗಿ ನಿಭಾಯಿಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

ನಗರದಲ್ಲಿ ಅಪಾರ ಮಳೆಯಿಂದ ತೊಂದರೆಗೀಡಾಗುವ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದೆ. ನಗರದಲ್ಲಿರುವ 11 ರಾಜಾಕಾಲುವೆಗಳ ಹೂಳೆತ್ತಲು ರೂ. 168 ಲಕ್ಷದ ಕಾಮಗಾರಿ ನಡೆಯುತ್ತಿದ್ದು, ಶೇಕಡಾ 80 ರಷ್ಟು ಕಾಮಗಾರಿ ಈಗಾಗಲೇ ಮುಗಿದಿದೆ.

24 ಗಂಟೆಗಳ ಕಂಟ್ರೋಲ್ ರೂಂ ಮಹಾನಗರಪಾಲಿಕೆಯಲ್ಲಿ ತೆರೆಯಲಾಗಿದ್ದು, ಮಳೆಗಾಲದಲ್ಲಿ ಕಾರ್ಯಾಚರಣೆಗೆ ಪ್ರತೀ 6 ವಾರ್ಡುಗಳಿಗೆ ಒಂದು ತಂಡವನ್ನು ರಚಿಸಲಾಗಿದೆ. 16 ಪರಿಹಾರ ಕೇಂದ್ರಗಳನ್ನು ಗುರುತಿಸಿ, ಸಿದ್ಧಪಡಿಸಲಾಗಿದೆ ಎಂದು ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ತಿಳಿಸಿದ್ದಾರೆ.

Comments are closed.