ಕರಾವಳಿ

ದ.ಕ. ಜಿಲ್ಲೆಯಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ: ಇಂದು ಒಂದೇ ದಿನ 24 ಪಾಸಿಟಿವ್

Pinterest LinkedIn Tumblr

ಮಂಗಳೂರು, ಮೇ. 28 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಎಲ್ಲಾ ಸೋಂಕಿತರು ಮಹಾರಾಷ್ಟ್ರದ ಮುಂಬೈನಿಂದ ಬಂದವರಾ ಗಿದ್ದಾರೆ.

ಅಂತಾರಾಜ್ಯ ಪ್ರಯಾಣಕ್ಕೆ ಅನುಮತಿ ದೊರೆತ ಬಳಿಕ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ 6 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು, ಇದೀಗ ರಾಜ್ಯ ಆರೋಗ್ಯ ಇಲಾಖೆ ಸಂಜೆ ಪ್ರಕಟಿಸಿದ ಬುಲೆಟಿ ನಲ್ಲಿ ಮತ್ತೆ 18 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿಗೆ ಒಳಗಾದವರೆಲ್ಲರು ಮಹಾರಾಷ್ಟ್ರದ ಮುಂಬೈನಿಂದ ಬಂದವರಾಗಿದ್ದಾರೆ.

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 104ಕ್ಕೆ ಏರಿಕೆಯಾಗುವ ಮೂಲಕ ಶತಕ ದಾಟಿದೆ.

ಪ್ರಮುಖ ಅಂಶಗಳು :

ದ.ಕ. ಜಿಲ್ಲೆಯಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ

ಇಂದು ಒಟ್ಟು 24 ಜನರಿಗೆ ಕೊರೋನಾ ಪಾಸಿಟಿವ್ ದೃಢ

ಸಂಜೆ ಬುಲೆಟಿನ್ ನಲ್ಲಿ ಒಟ್ಟು 18 ಜನರಿಗೆ ಪಾಸಿಟಿವ್

18 ಕೂಡ ಮಹಾರಾಷ್ಟ್ರದಿಂದ ಬಂದವರಿಗೆ ಕೊರೋನಾ ಸೋಂಕು

ಒಟ್ಟು 24 ರಲ್ಲಿ 1 ಕೇರಳದಿಂದ ಮತ್ತು 23 ಮಹಾರಾಷ್ಟ್ರದಿಂದ ಬಂದವರು

ಎಲ್ಲರು ಮಂಗಳೂರಿಗೆ ಬಂದು ಕ್ವಾರಂಟೈನ್ ಆಗಿದ್ದರು.

Comments are closed.