ಕರಾವಳಿ

ಬಜ್ಪೆ ಸಮೀಪ ಮೂವರು ಯುವಕರ ಮೇಲೆ ತಲ್ವಾರ್ ದಾಳಿ : ಓರ್ವ ಸ್ಥಳದಲ್ಲೇ ಸಾವು-ಇಬ್ಬರ ಸ್ಥಿತಿ ಗಂಭೀರ

Pinterest LinkedIn Tumblr

ಮಂಗಳೂರು : ಬಜ್ಪೆ ಠಾಣಾ ವ್ಯಾಪ್ತಿಯ ಎಕ್ಕಾರ್ ದೇವರಗುಡ್ಡೆ ಎಂಬಲ್ಲಿ ತಂಡವೊಂದು ಮೂವರು ಯುವಕರ ಮೇಲೆ ದಾಳಿ ನಡೆಸಿ ತಲವಾರಿನಿಂದ ಕಡಿದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ ತಲ್ವಾರ್ ದಾಳಿ ನಡೆದಿದ್ದು ದಾಳಿಯಲ್ಲಿ ಹತ್ಯೆಗೀಡಾದ ಯುವಕನನ್ನು ಕಾವೂರು ಮರಕಡ ನಿವಾಸಿ ಕೀರ್ತನ್(20) ಎಂದು ಗುರುತಿಸಲಾಗಿದೆ. ಈತನ ಸ್ನೇಹಿತರಾದ ನಿತಿನ್(20), ಮಣೇಶ್(20) ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ರಮ ಮರಳುಗಾರಿಕೆಯ ದ್ವೇಷದ ಹಿನ್ನಲೆಯಲ್ಲಿ ಸ್ಥಳೀಯ ತಂಡವೊಂದು ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಬಜ್ಪೆ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.