ಕರಾವಳಿ

ದ.ಕ.ಜಿಲ್ಲೆಯಲ್ಲಿ ಇಂದು ನಾಲ್ಕು ಪೊಸಿಟಿವ್ ಪತ್ತೆ : ರಾಜ್ಯದಲ್ಲಿಂದು187 ಮಂದಿಯಲ್ಲಿ ಸೋಂಕು ದೃಢ

Pinterest LinkedIn Tumblr

ಮಂಗಳೂರು, ಜೂ.01 : ರಾಜ್ಯದಲ್ಲಿ ಇಂದು ಮತ್ತೊಮ್ಮೆ ಕೊರೊನಾ ಮಹಾಸ್ಪೋಟ ಸಂಭವಿಸಿದ್ದು, ದ.ಕ.ಜಿಲ್ಲೆಯಲ್ಲಿ 4 ಸೇರಿದಂತೆ ಕರ್ನಾಟಕದಲ್ಲಿ ಇಂದು ಒಂದೇ ದಿನ ಬರೋಬ್ಬರಿ 187 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 187 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 4 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಉಡುಪಿ 73, ಬೆಂಗಳೂರು 28, ಕಲಬುರ್ಗಿ 24, ಹಾಸನ 16, ಮಂಡ್ಯ15, ಶಿವಮೊಗ್ಗ 9, ಚಿಕ್ಕಬಳ್ಳಾಪುರ 5, ದಕ್ಷಿಣಕನ್ನಡ 4, ಬಳ್ಳಾರಿ 3, ಬೀದರ್ 2, ಬಾಗಲಕೋಟೆ 2, ಧಾರವಾಡ 2, ವಿಜಯಪುರ 1, ಕೋಲಾರ 1, ರಾಮನಗರ 1, ಹಾವೇರಿ 1 ಪ್ರಕರಣ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3408ಕ್ಕೆ ಏರಿದೆ.

ಸೋಂಕಿತರ ಪೈಕಿ ಹೆಚ್ಚಿನವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದು, ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿದುಬಂದಿದೆ. ಇನ್ನು ಕೆಲವು ಪ್ರಕರಣಗಳ ಮೂಲ ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ.

Comments are closed.