ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕುಂದಾಪುರ ಚಿಕನ್ ಸಾಲ್ ನಿವಾಸಿ ಮಹಾರಾಷ್ಟ್ರ ಮೂಲದ ಬಿಶ್ವಾಸ್ ಎಂದು ಗುರುತಿಸಲಾಗಿದೆ.
ಕುಂದಾಪುರ ಚಿಕನ್ ಸಾಲ್ ನಿವಾಸಿಯೊಬ್ಬರು ತಮ್ಮ ಕುಟುಂಬದೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಬೆಳಗಿನ ಜಾವ ಅವರ ಅಪ್ರಾಪ್ತ ವಯಸ್ಸಿನ ಮಗಳು ಒಬ್ಬಂಟಿಯಾಗಿರುವಾಗ ಆರೋಪಿ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದು ಆಕೆ ಬೊಬ್ಬೆ ಹಾಕಿದಾಗ ಅಕ್ಕಪಕ್ಕದವರು ಆಗಮಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Comments are closed.