ಮಂಗಳೂರು ಜೂನ್ 02 : ಕರ್ನಾಟಕ ವೈದ್ಯಕೀಯ, ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಬುಧವಾರ ಹಾಗೂ ಗುರುವಾರ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದು, ಮಂಗಳೂರಿನಲ್ಲಿ ಕೋವಿಡ್ – 19ಗೆ ಸಂಬಂಧಪಟ್ಟಂತೆ ವಿವಿಧ ವೈದ್ಯಕೀಯ ಸಭೆಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಜೂನ್ 03 ರಂದು ಮಂಗಳೂರಿಗೆ ಆಗಮಿಸಿ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ – 19 ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ, ಬಳಿಕ ಇಲ್ಲೇ ವಾಸ್ತವ್ಯ ಮಾಡಲಿದ್ದಾರೆ.
ಜೂನ್ 04 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ನಗರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ರಸ್ತೆ ಮೂಲಕ ತೆರಳುವರು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
Comments are closed.