ಕರಾವಳಿ

ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ಎದುರಿಸಲು ಮಂಗಳೂರಿಗೆ ಬಂದಿದೆ ಎನ್‌ಡಿಆರ್‌ಎಫ್‌ ಬೆಟಾಲಿಯನ್‌

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕ ವಾಗಿ ಎದುರಿಸಲು ಎನ್‌ಡಿಆರ್‌ಎಫ್‌ (ರಾಷ್ಟ್ರೀಯ ವಿಪತ್ತು ಪರಿಹಾರ ತಂಡ) ಬೆಟಾಲಿಯನ್‌ ಬುಧವಾರ ಮಂಗಳೂರಿಗೆ ಆಗಮಿಸಿತು.

ಎನ್‌ಡಿಆರ್‌ಎಫ್‌ ದಕ್ಷಿಣ ವಲಯದ ಕಚೇರಿ ಆಂಧ್ರಪ್ರದೇಶದ ಗುಂಟೂರಿನಲ್ಲಿರುವುದರಿಂದ ತುರ್ತು ಸಂದರ್ಭ  ಅತಿವೃಷ್ಟಿ ಪ್ರದೇಶಗಳಿಗೆ ತಲುಪಲು ವಿಳಂಬವಾಗುವ ಕಾರಣ ಈ ವರ್ಷವೂ ಮುಂಚಿತವಾಗಿಯೇ ಎನ್‌ಡಿಆರ್‌ಎಫ್‌ ತರಿಸಿಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದ್ದು, ಅದರಂತೆ ಜೂ. 3ರಂದು ಜಿಲ್ಲೆಗೆ ಆಗಮಿಸಿದೆ.

ಸುಮಾರು 25 ಸದಸ್ಯರ NDRF ತಂಡವು ಪಿಲಿಕುಲ ಸ್ಕೌಟ್ಸ್ ಭವನದಲ್ಲಿ ವಾಸ್ತವ್ಯ ಹೂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಸಂಭವಿಸಬಹುದಾದ ದುರಂತಗಳನ್ನು ನಿರ್ವಹಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡ ತ್ವರಿತ ಕಾರ್ಯಾಚರಣೆ ನಡೆಸಲಿದೆ. ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ಸನ್ನಿವೇಶ ಎದುರಿಸಲು ಜಿಲ್ಲಾಡಳಿತಕ್ಕೆ NDRF ಆಗಮನ ನೆರವಾಗಲಿದೆ.

Comments are closed.